ಹಣ್ಣು-ತರಕಾರಿ ಸಾಗಾಟ ಲಾರಿ ಪಲ್ಟಿ: 10 ಮಂದಿ ಸಾವು: ಮೃತರ ಕುಟುಂಬಗಳಿಗೆ ತಲಾ ರೂ.3 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಹಾವೇರಿಯಿಂದ ಕುಮಟಾ ಕಡೆಗೆ ವ್ಯಾಪಾರಕ್ಕೆಂದು ತರಕಾರಿ ಹಾಗೂ ಹಣ್ಣುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಯಲ್ಲಾಪುರದ ಗುಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಪಲ್ಟಿಯಾಗಿ 14 ಜನ ಮೃತ ಪಟ್ಟ ಘಟನೆ ನಡೆದಿದೆ.

ತಮ್ಮ ದಿನನಿತ್ಯ ಜೀವನ ಸಾಗಿಸಲು ಪರ ಸ್ಥಳಗಳಿಂದ ವ್ಯಾಪಾರಕ್ಕೆ ಬಂದವರು ಕ್ರೂರ ವಿಧಿಯ ಆಟಕ್ಕೆ ಬಲಿಯಾಗಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *