ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6:00 ಗಂಟೆಯಿಂದ 8:30 ಗಂಟೆಯವರೆಗೆ ನಡೆಯಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ದೇವನಹಳ್ಳಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ, ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬುದು 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯವಾಗಿದ್ದು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಶುಹಬುದ್ದೀನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್‌ನೀಮ್.ಎಸ್.ಎ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

1 hour ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago