Categories: ವಿಜಯಪುರ

ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?* *ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..!

ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಮಯಗಳಾಗಿ ಪರಿವರ್ತನೆಗೊಂಡು ನಿತ್ಯವೂ ನರಕಯಾತನೆ ಅನುಭವಿಸುವುದು ಸಾಮಾನ್ಯ. ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿದವರು ಮತ್ತೊಮ್ಮೆ ಇತ್ತ ತಿರುಗಿಯೂ ನೋಡುವುದಿಲ್ಲ. ಆದರೆ ಇಂತಹ ತೀವ್ರ ಹದಗೆಟ್ಟ ರಸ್ತೆ ಮೇಲೆಯೇ ನಿತ್ಯವೂ ಸಂಚರಿಸುವ ಅನಿವಾರ್ಯ ಮಾತ್ರ ಈ ಗ್ರಾಮದ ಜನರಿಗೆ ತಪ್ಪಿಲ್ಲ..!

ಹೌದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಟಾಕಳಿ ಗ್ರಾಮದಿಂದ ಕೆರೂರು ಮತ್ತು ಟಾಕಳಿ ಗ್ರಾಮದಿಂದ ಉಮರಾಣಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸುಮಾರು ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಹಾಳಾಗಿದ್ದು, ಜನ ಸಾಮಾನ್ಯರ ಸಂಚಾರ ದುಸ್ತರವಾಗಿದೆ. ಚುನಾವಣೆ ಸಮಯದಲ್ಲಿ ಮಾತ್ರ ಬಂದು ಆಶ್ವಾಸನೆ ಕೊಟ್ಟು ಮಾಯವಾಗುವ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಹ ಗ್ರಾಮೀಣ ರಸ್ತೆಗಳ ದುರಸ್ತಿ ಕಡೆ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣಗಳಾದ ಚಡಚಣ, ಇಂಡಿ, ವಿಜಯಪುರಕ್ಕೆ ತೆರಳಲು ಜನರು ಮತ್ತು ರೈತರು ಹೊಲ-ಗದ್ದೆಗಳಿಗೆ, ವಿದ್ಯಾರ್ಥಿಗಳು ಶಾಲೆಗಳಿಗೆ, ರೋಗಿಗಳು ಆಸ್ಪತ್ರೆಗೆ ತೆರಳಲು ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಆದರೆ ರಸ್ತೆಯ ಎರಡು ಇಕ್ಕೆಲಗಳಲ್ಲಿ ಬೆಳೆದು ನಿಂತ ಮುಳ್ಳಿನ ಗಿಡಗಳಿಂದ ಸವಾರರಿಗೆ ಎದುರಿಗೆ ಬರುವ ವಾಹನಗಳು ಕಾಣುವುದಿಲ್ಲ. ಇನ್ನು ದ್ವಿಚಕ್ರ ವಾಹನ ಸವಾರರ ಪ್ರಯಾಣವಂತೂ ಹೇಳತೀರದು, ಬೈಕ್ ಸವಾರರು ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ಆಯಾತಪ್ಪಿ ಗಾಯಗಳು ಮಾಡಿಕೊಳ್ಳುತ್ತಿರುವ ದೃಶ್ಯ ಕಾಣಬಹುದು.

ಈ ರಸ್ತೆಯಲ್ಲಿ ನಿತ್ಯವೂ ಹರಸಾಹಸಪಟ್ಟು ಪ್ರಯಾಣಿಸುವ ಗ್ರಾಮಸ್ಥರು ಹಾಗೂ ರೈತರ ಗೋಳು ಕೇಳೊರಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇದಕ್ಕೂ ತಮಗೂ ಏನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಗ್ರಾಮಸ್ಥರ ಕಂಗೆಣ್ಣಿಗೆ ಗುರಿಯಾಗಿದೆ.

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ರಸ್ತೆ ಕಾಮಗಾರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ “ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡಲ್ಲ” ಎಂಬುವಂತೆ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ ಜತೆಗೆ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಅನೇಕ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಗ್ರಾಮೀಣ ಭಾಗದಲ್ಲಿ ಒಳ್ಳೆಯ ಶಾಲೆ, ಶಿಕ್ಷಕರ ಕೊರತೆ, ಸರಿಯಾದ ರಸೆ, ಬಸ್ ಸಂಪರ್ಕವಿಲ್ಲದೆ ಜನರು ಅಭಿವೃದ್ಧಿಯಿಂದ ಬಹಳಷ್ಟು ದೂರ ಉಳಿದು, ವಂಚಿತರಾಗಿರುವುದು ಇಂದಿಗೂ ಕಾಣುತ್ತಿದ್ದೇವೆ.
ಆದಷ್ಟು ಬೇಗ ಈ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೊಸ ರಸ್ತೆ ಮಾಡಿಸುವ ಮೂಲಕ ರೈತಾಪಿ ಜನರ ಸಂಚಾರ ಹಾಗೂ ಪಟ್ಟಣದ ಮಾರುಕಟ್ಟೆಗಳಿಗೆ ರೈತರ ಬೆಳೆಗಳನ್ನು ಸಾಗಿಸಲು ಒಳ್ಳೆಯ ರಸ್ತೆ ಸಂಪರ್ಕದ ಅನುಕೂಲ ಕಲ್ಪಿಸಬೇಕಿದೆ.

“ಅಧಿಕ ಮಳೆ ಬಂದರೆ ಪಕ್ಕದಲ್ಲಿರುವ ಭೀಮಾ ನದಿ ನೀರು ಹರಿದು ಟಾಕಳಿ-ಕೆರೂರ ರಸ್ತೆ ನಡುವಿನ ಹಳ್ಳಕ್ಕೆ ಸೇತುವೆ ಇಲ್ಲದ ಕಾರಣ ಸಂಚಾರ ಸ್ಥಗಿತವಾಗುತ್ತದೆ. ರಸ್ತೆ ಹದಗೆಟ್ಟ ಕಾರಣ ಗ್ರಾಮಕ್ಕೆ ಬರುವ ಬಸ್ ಕೂಡ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ಗರ್ಭೀಣಿಯರು ಈ ರಸ್ತೆಯಲ್ಲಿ ಸಾಗಲು ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಟಾಕಳಿಯಿಂದ ಕೆರೂರಕ್ಕೆ ಮತ್ತು ಟಾಕಳಿಯಿಂದ ಉಮರಾಣಿಗೆ ಸಂಪರ್ಕಿಸುವ ರಸ್ತೆ ಡಾಂಬರಿಕರಣ ಮಾಡಲು ಮುಂದಾಗಬೇಕುʼ ಎಂದು ಅಮಸಿದ್ದ ಮಲ್ಲಪ್ಪ ಒಡೆಯರ (ಗ್ರಾಮಸ್ಥರು, ಟಾಕಳಿ ಗ್ರಾಮ) ಒತ್ತಾಯಿಸಿದರು.

ವರದಿ: ರೇವಣಸಿದ್ಧ ಬಗಲಿ*

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

21 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago