ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಗ್ಗೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ ಮೇಲೆಯೂ ವಿಪಕ್ಷಗಳ ಶಾಸಕರು ಸದನದಲ್ಲಿ ಪುನ: ಅದನ್ನೇ ಪ್ರಸ್ತಾಪಿಸುವುದು ತರವಲ್ಲ.
ಇಂತಹ ಪ್ರಕರಣದಲ್ಲಿ ಯಾರೇ ತೊಂದರೆಗೆ ಒಳಗಾಗಿದ್ದರೂ ಅವರಿಗೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಸದಸ್ಯರು ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವುದು ನೋವಿನ ವಿಚಾರ. ರಾಜ್ಯದ ಕೋಟ್ಯಂತರ ಜನರ ಆಶೋತ್ತರಗಳನ್ನು, ದುಃಖ ದುಮ್ಮಾನಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಿರುವುದು ನಮ್ಮ ಕರ್ತವ್ಯ. ಇದಕ್ಕೆ ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ನಮ್ಮ ಜೊತೆ ಸಹಕರಿಸಬೇಕು.
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…