2024-25ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿನೀರಾವರಿ ಯೋಜನೆಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡ ಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಪ್ರಥಮ 2 ಹೆಕ್ಟೇರ್ ಗೆ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ನಂತರ ಮೂರು ಹೆಕ್ಟೇರ್ ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). ಸೂಕ್ಷ್ಮ ಹನಿನೀರಾವರಿ ಹಾಗೂ ತುಂತುರು ನೀರಾವರಿ ಅಳವಡಿಕೆಗೆ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನವನ್ನು ನೀಡಲಾಗುವುದು.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ-9480461234, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ನೆಲಮಂಗಲ-9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…