ಇಂದು ಹನುಮ ಜಯಂತಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಪೆರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಹನುಮದ್ವ್ರತ ಪ್ರಯುಕ್ತ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಪಂಚಮುಖಿ ಆಂಜನೇಯಸ್ವಾಮಿಗೆ ಹೋಮ ಹವನ ನಡೆಸಲಾಯಿತು. ಭಕ್ತಾಧಿಗಳ ಸಂಕಷ್ಟ ಪರಿಹಾರಕ್ಕಾಗಿ ಪ್ರತ್ಯಂಗಿರ ಮಹಾಕಾಳಿ ಯಾಗವನ್ನು ಮಾಡಲಾಯಿತು. ಸುಮಾರು 25 ರಿಂದ 30 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಮಾತನಾಡಿ, ಉದ್ಭವ ದಿನ್ನೆ ಆಂಜಿನೇಯ ಸ್ವಾಮಿಗೆ 800 ವರ್ಷದ ಇತಿಹಾಸವಿದೆ. ದೇವಾಲಯಕ್ಕೆ ಬಂದು ಭಕ್ತಾಧಿಗಳು ಅರಕೆ ಹೊತ್ತರೆ ಆಂಜನೇಯ ಸ್ವಾಮಿ ಈಡೇರಿಸುತ್ತಾನೆ. ಸಂತಾನ ಇಲ್ಲದವರು ದೇವರಲ್ಲಿ ಪ್ರಾರ್ಥನೆ ಮಾಡಿದರೆ ಸಂತಾನ ಫಲಗಳು ಪ್ರಾಪ್ತಿಯಾಗುತ್ತೆ. ಮೋಕ್ಷ ಫಲಗಳು ಸಿಗುತ್ತೆ ಎಂದರು.
ಪ್ರತಿ ವರ್ಷ ಹನುಮ ಜಯಂತಿ ಪ್ರಯುಕ್ತ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಆಂಧ್ರ, ತಮಿಳುನಾಡು, ಕೇರಳ, ಹಾಸನ, ಚನ್ನರಾಯಪಟ್ಟಣ, ಕಾಳಹಸ್ತಿ ಇಂದ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಾರೆ ಎಂದರು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…