ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರು ದುಡಿಮೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮೇ 04 ರಂದು ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ 11 ಮಕ್ಕಳ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ರವರು ಜಂಟಿ ತಪಾಸಣೆ ಕೈಗೊಂಡು ರಕ್ಷಿಸಲಾಗಿದೆ.
ರಕ್ಷಿಸಿದ ಬಾಲ ಮತ್ತು ಕಿಶೋರ ಕಾರ್ಮಿಕನನ್ನು ಮಕ್ಕಳ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಮೌಖಿಕ ಆದೇಶದ ಮೇರೆಗೆ ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಗಿದೆ, ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸಲಾಗಿದೆ.
ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ 50,000/- ಸಾವಿರದವರೆಗು ದಂಡ ವಿಧಿಸಲಾಗುತ್ತದೆ. 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡಿ ಮಾಹಿತಿ ನೀಡಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಬಾಲಕಾರ್ಮಿಕ ಯೋಜನೆ ಸೊಸೈಟಿಯ ಯೋಜನಾ ನಿರ್ದೇಶಕರಾದ ಗಣೇಶಮೂರ್ತಿ ಎ. ಎಸ್, ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್, ಇತರೆ ಸಿಬ್ಬಂದಿ ಇದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…
ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…
ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…
ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…
ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…
ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…