Categories: ಲೇಖನ

ಹಬ್ಬಗಳ ಆಚರಣೆ: ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು…..

ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ.
ಬಡವರು ಅಂದಿನ ಕೂಲಿ ಹಣದಲ್ಲಿ ಅಂದೇ ರಾಗಿ ಜೋಳ ಗೋದಿ ತಂದು ಅದನ್ನು ಪುಡಿ ಮಾಡಿಸಿ ಊಟ ಮಾಡಬೇಕಿತ್ತು……

ಗಮನಿಸಿ ,
ಅಂದಿನ ಕಾಲದಲ್ಲಿ ಒಂದು ಮಾತು ಚಾಲ್ತಿಯಲ್ಲಿತ್ತು.
” ಹಬ್ಬದಲ್ಲಿ ಅನ್ನ ಊಟ ಮಾಡಿದಂತೆ ” ಅಂದರೆ ಹಬ್ಬಗಳಲ್ಲಿ ಮಾತ್ರ ಅನ್ನ ತಿನ್ನುತ್ತಿದ್ದರು. ಉಳಿದಂತೆ ಮುದ್ದೆ ರೊಟ್ಟಿ ಮತ್ತು ಗೊಜ್ಜು.
ತರಕಾರಿಗಳು, ಬೇಳೆಗಳು, ಹಣ್ಣುಗಳು ಕೇವಲ ಕೆಲವೇ ಶ್ರೀಮಂತರು ಮಾತ್ರ ಉಪಯೋಗಿಸುತ್ತಿದ್ದರು. ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ, ಕರ್ಜೂರ ಬಹಳ ಜನ ನೋಡೇ ಇರಲಿಲ್ಲ. ಬನ್ನು, ಬ್ರೆಡ್ಡು ಕೇವಲ ಜ್ವರ ಬಂದಾಗ ಮಾತ್ರ ಕೊಡುತ್ತಿದ್ದರು. ಬನ್ನು ತಿನ್ನುವ ಸಲುವಾಗಿ ಜ್ವರ ಬರಲಿ ಎಂದು ಎಷ್ಟೋ ಜನ ಬಯಸುತ್ತಿದ್ದುದು ಉಂಟು…..

ಒಂದು ಕೆಜಿ ಕಡಲೆಕಾಯಿ ಎಣ್ಣೆ, ಒಂದು ಕೆಜಿ ಸಕ್ಕರೆ ಇಡೀ ತಿಂಗಳಲ್ಲಿ ಖರ್ಚು ಮಾಡಿದರೆ ಅದೇ ಹೆಚ್ಚು. ಇನ್ನು ಶುಗರ್, ಬಿಪಿ, ಕೊಲೆಸ್ಟರಾಲ್‌ ಇರುವುದಾದರೂ ಎಲ್ಲಿಂದ.
ಬೊಂಡ, ಬಜ್ಜಿ, ವಡೆ, ಚಕ್ಕುಲಿಗಳೇ ಭಕ್ಷ್ಯ ಭೋಜನ. ಹೋಳಿಗೆ, ಪಾಯಸ, ಕಜ್ಜಾಯ, ಕಡುಬು ಮುಂತಾದ ಸಿಹಿ ತಿನಿಸುಗಳು ಕೆಲವೇ ವಿಶೇಷ ಹಬ್ಬಗಳಿಗೆ ಮಾತ್ರ ಸೀಮಿತವಾಗಿತ್ತು. ಹಾಲು, ತುಪ್ಪ ಹಳ್ಳಿಯಲ್ಲೇ ತಯಾರಾದರೂ ಸ್ವಂತಕ್ಕೆ ಉಪಯೋಗಿಸುತ್ತಿದ್ದುದು ತುಂಬಾ ಕಡಿಮೆ. ಅದನ್ನು ಮಾರಿ ಜೀವನ ಸಾಗಿಸುತ್ತಿದ್ದರು. ಇದು ಸಾಮಾನ್ಯ ಜನರ ಜೀವನ ಶೈಲಿ.
ಇನ್ನು ಬಡವರ ಸ್ಥಿತಿ ವರ್ಣಿಸಲು ಹೋದರೆ ಅಳು ತಡೆಯಲಾಗುವುದಿಲ್ಲ. ಅದನ್ನು ಮತ್ತೊಮ್ಮೆ ಹೇಳುತ್ತೇನೆ….

ಈಗಿನ ಜೀವನ ಶೈಲಿ ಅಂದರೆ 1990 ರ ನಂತರ ಹುಟ್ಟಿದವರದು ಹೇಗಿದೆ ನೋಡೋಣ…

ಬೆಳಗ್ಗೆ ಬೆಡ್ ಕಾಫಿಯಿಂದ ಶುರುವಾಗಿ breakfast – lunch – evening snack – dinner ಮತ್ತು ಆಗಾಗ ಕುರುಕಲು ತಿಂಡಿ ಅವರ ದಿನನಿತ್ಯದ ಆಹಾರ.
ಇಂದು ಸಿಹಿ ತಿನಿಸುಗಳು – ಮಾಂಸಾಹಾರ – ವಿವಿಧ ರೀತಿಯ ಪಾನೀಯಗಳು ಮುಂತಾದವು ಬಯಸಿದಾಗ ತಿನ್ನಬಹುದು. ದ್ರಾಕ್ಷಿ – ಗೋಡಂಬಿ – ಬಾದಾಮಿ ಮುಂತಾದ ಪದಾರ್ಥಗಳನ್ನು ಉಪ್ಪಿಟ್ಟು, ಕೇಸರಿಬಾತ್, ವಾಂಗಿಬಾತ್, ಚಿತ್ರಾನ್ನ, ಪಾಯಸ ಎಲ್ಲದರಲ್ಲೂ ಉಪಯೋಗಿಸುತ್ತಾರೆ.
ಅಂದಿನ ಬಹುದೊಡ್ಡ ಸಮಾರಂಭಗಳೆಂದರೆ ಕೇವಲ ಮದುವೆ ಮಾತ್ರ ಆಗಿತ್ತು…..

ಆದರೆ ಈಗ,
Engagement,
Marriage,
Reception,
Naming ceremony,
Birthday party,
Kitty party,
Bachelor party,
Marriage anniversary,
Get together..
ಅಬ್ಬಾ,
party ಗೊಂದು ನೆಪ ಸಿಕ್ಕರೆ ಸಾಕು ಮತ್ತು ಅದರಲ್ಲಿ ಎಲ್ಲಾ ರೀತಿಯ ಭಕ್ಷ್ಯ ಭೋಜನ ಮತ್ತು ಪಾನೀಯ ಕಡ್ಡಾಯ.
ಆ ಕಾರಣಕ್ಕಾಗಿ ದೈಹಿಕ ಶ್ರಮ ಕಡಿಮೆಯಾಗಿ ಸಹಜವಾಗಿ ಖಾಯಿಲೆಗಳು ಹೆಚ್ಚಾಗುತ್ತಿದೆ…..

ಎಷ್ಟೊಂದು ವ್ಯತ್ಯಾಸ. ಅಂದಿಗೂ ಇಂದಿಗೂ. ಇದನ್ನು ಹೊರತುಪಡಿಸಿ ಇನ್ನೂ ಹಲವಾರು ಬದಲಾವಣೆಗಳು ನಿಮ್ಮ ಮನದಲ್ಲಿ ಮೂಡುತ್ತದೆ…..

ಬದಲಾವಣೆಗಳನ್ನು ಒಪ್ಪಿಕೊಳ್ಳುತ್ತಾ ಅದರ ದಿಕ್ಕನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಾ ಜೀವನಮಟ್ಟ ಸುಧಾರಿಸಿಕೊಳ್ಳೋಣ ಎಂದು ಆಶಿಸುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

9 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

12 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

14 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

17 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

18 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago