ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ದೇವನಹಳ್ಳಿ ಡಾಬಾ ಗೇಟ್ ಬಳಿಯ ಐವಿಸಿ ರಸ್ತೆ ಬಳಿ ಸಂಭವಿಸಿದೆ.

ಮೂಲತಃ ಗುಡಿಬಂಡೆ ತಾಲುಕಿನ ಚಿಕ್ಕತಮ್ಮನಹಳ್ಳಿ ಗ್ರಾಮದ ಮಂಜುನಾಥ ಎಂಬುವರ ಪುತ್ರಿ ದೀಪಿಕಾ (16) ಎಂಬ ಪ್ರಥಮ ಪಿಯು ವಿದ್ಯಾರ್ಥಿನಿ ರೈಲು ಡಿಕ್ಕಿಯಾಗಿ ಮೃತಪಟ್ಟಿರುವಾಕೆ.

ಮೃತ ದೀಪಿಕಾ ತನ್ನ ತಂದೆಯ ಮರಣದ ಬಳಿಕ ತಾಯಿಯ ತವರು ಮನೆಯಾದ ತಾಲೂಕಿನ ಉಗನವಾಡಿ ಗ್ರಾಮದಲ್ಲಿ ತಾಯಿ ಮತ್ತು ತಾತನ ಜೊತೆ ವಾಸವಿದ್ದು, ಪ್ರತಿ ದಿನ ಆಕಾಶ್ ಪಿಯು ಕಾಲೇಜಿಗೆ ಗ್ರಾಮದಿಂದ ಡಾಬ ಗೇಟ್ ಬಳಿಗೆ ತಾತನ ಜೊತೆ ದ್ವಿಚಕ್ರವಾಹನದಲ್ಲಿ ಡ್ರಾಪ್ ಮಾಡಿಸಿಕೊಂಡು ನಂತರ ಬಸ್‌ನಲ್ಲಿ ಹೋಗಿಬರುತ್ತಿದ್ದಳು.

 ಎಂದಿನಂತೆ ತಾತ ರಮೇಶ್ ಮೊಮ್ಮಗಳನ್ನು ಮಂಗಳವಾರ ಬೆಳಿಗ್ಗೆ ಗೇಟ್ ಬಳಿ ಬಿಟ್ಟು ಬಸ್ಸಿಗೆ ಹತ್ತಿಸಿ ಹೋಗಿದ್ದರು. ಆಕೆ ಮತ್ತೆ ಮಧ್ಯಾಹ್ನ ಕಾಲೇಜಿನಿಂದ ಬರುವಾಗ ಹಳಿ ದಾಟಲು ಯೋಗ್ಯವಲ್ಲದ ಕಡೆ ರೈಲು ಹಳಿ ದಾಟಲು ಯತ್ನಿಸಿದಾಗ ಚಿಕ್ಕಬಳ್ಳಾಪುರ ಬೆಂಗಳೂರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ.

ಸ್ಥಳಕ್ಕೆ ದೇವನಹಳ್ಳಿ ಪೊಲೀಸರ ಜೊತೆ ಬಯಪನಹಳ್ಳಿ ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಕುಟುಂಬಸ್ಥರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಫ್ಲೈಓವರ್ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

ಘಟನೆ ನಡೆದ ಐವಿಸಿ ರಸ್ತೆ ಮೂಲಕ ಹತ್ತಾರು ಗ್ರಾಮಗಳ ಜನರು ಸಂಚಾರ ನಡೆಸುತ್ತಾರೆ. ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ಬಳಿ ನಿರ್ಮಿಸಿರುವ ರೈಲ್ವೆ ಅಂಡರ್‌ಪಾಸ್ ಅವೈಜ್ಞಾನಿಕವಾಗಿದ್ದು, ಹಿಂದಿನ ರೈಲ್ವೆ ದಾಟುವ ಮಾರ್ಗವನ್ನು ಮುಚ್ಚಿರುವುದರಿಂದ ಜನರು ಅನಿವಾರ್ಯವಾಗಿ ಹಳಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಟಿ. ಹೊಸಹಳ್ಳಿ ಗ್ರಾಮದ ಸಂತೋಷ್, ಇದೇ ಸ್ಥಳದಲ್ಲಿ ಮೂರು ವರ್ಷಗಳ ಹಿಂದೆ ನನ್ನ 11 ವರ್ಷದ ಮಗ ಸಂಜಯ್ ಕೂಡ ರೈಲು ಅಪಘಾತದಲ್ಲಿ ಮೃತಪಟ್ಟಿದ್ದ. ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ, ಕೇಂದ್ರ ಸರ್ಕಾರ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದೇಶವಾಗಿದೆ ಎನ್ನಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾಗದೆ ಇನ್ನೂ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಇಂತಹ ದುರಂತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರ ಮತ್ತು ರೈಲ್ವೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

21 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago