ಹಳೇ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯನ ಭೀಕರ ಕೊಲೆ ನಡೆದಿದೆ. ಈ ಘಟನೆ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲು ನರಸಾಪುರದಲ್ಲಿ ನಡೆದಿದೆ.
ಲಾಂಗು ಮಚ್ಚುಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬೈಲುನರಸಾಪುರ ಗ್ರಾಮ ಪಂಚಾಯಿತಿ ಸದಸ್ಯ ಅಪಾಕ್ ಅಮಿರ್ ಖಾನ್ (46) ಮೃತ ದುರ್ದೈವಿ.
ಗ್ರಾಮ ಪಂಚಾಯಿತಿ ಕಚೇರಿ ಬಳಿಯೇ ಭೀಕರವಾಗಿ ಲಾಂಗು ಮಚ್ಚುಗಳಿಂದ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಲಾಂಗು ಮಚ್ಚುಗಳಿಂದ ಏಟು ತಿಂದು ರಕ್ತದ ಮಡುವಿನಲ್ಲಿದ್ದ ಅಮೀರ್ ಖಾನ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.