ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.
1994 -1995 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 30 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.
ಗುರುಗಳನ್ನು ಬೆಳ್ಳಿ ರಥದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.
ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸುವ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.
ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.
ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
ನಂತರ ಹಳೇ ವಿದ್ಯಾರ್ಥಿ ನರಸಪ್ಪ ಮಾತನಾಡಿ, ನಾನು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಾಗ ಕೂಲಿ ಕೆಲಸ ಮಾಡುತ್ತಿದ್ದೆ. ಗುರುಗಳ ಮಾರ್ಗದರ್ಶನದಿಂದ ಈಗ ಸಿಂಚನ ಎಕ್ಸ್ಪೋರ್ಟ್ ಎಂಬ 2 ಸ್ವಂತ ಕಂಪನಿ ಮಾಡಿ.. ಸುಮಾರು 500 ರಿಂದ 600 ಜನಕ್ಕೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿರುತ್ತೇನೆ. ಇದಕ್ಕೆಲ್ಲಾ ಈ ನಮ್ಮ ಶಿಕ್ಷಕರಿಂದಲೇ ಎಂದು ಹೇಳಿದರು.
ಈ ವೇಳೆ ಕೆ ವೆಂಕಟರಮಣಪ್ಪ , ಕೆ ಎಸ್ ಮಂಜುನಾಥಚಾರಿ, ಕೆ ಚಿತ್ತಯ್ಯಾ, ರಮೇಶ ಎಂ, ಪ್ರಸ್ತುತ ಮುಖ್ಯೋಪಾಧ್ಯಾಯ ರಾಧಾಮಣಿ ಮತ್ತು ಇತರ ಶಿಕ್ಷಕರು, ಹಳೇ ವಿದ್ಯಾರ್ಥಿಗಳಾದ ನರಸಪ್ಪ ( ಉದ್ಯಮಿಗಳು ಸಿಂಚನ ಎಕ್ಸ್ಪೋರ್ಟ್ಸ್), ಉಮೇಶ, ಗಾಯಿತ್ರಮ್ಮ, ಸಿದ್ದರಾಜು, ಕೃಷ್ಣಪ್ಪ, ಚಿನ್ನಪ್ಪಯ್ಯಾ, ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…