Categories: ಲೇಖನ

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ…..

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ………

ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಸೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು. ಸ್ಥಳೀಯ ಹವಾಮಾನ ಮತ್ತು ಅವರವರ ಆರ್ಥಿಕ ಪರಿಸ್ಥಿತಿ ಅವಲಂಬಿಸಿ ಇದನ್ನು ನಿರ್ಮಿಸಲಾಗುತ್ತಿತ್ತು. ಎಲ್ಲೋ ಅಪರೂಪಕ್ಕೆ ಎಂಬಂತೆ ಶ್ರೀಮಂತರ ವಿಶಾಲ ಮನೆಗಳು, ಕಲ್ಲಿನ ದೊಡ್ಡ ಕಟ್ಟಡಗಳು ಕಾಣುತ್ತಿದ್ದವು. ಬ್ಯಾಂಕು, ಆಸ್ಪತ್ರೆ, ಅಂಚೆ ಕಚೇರಿ, ನಾಡ ಕಚೇರಿಗಳು, ಆರಕ್ಷಕ ಠಾಣೆಗಳು ಸಹ ಬಹುತೇಕ ಇದೇ ಮಾದರಿಯ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದವು.

ಎಲ್ಲಾ ಹಳ್ಳಿಯಲ್ಲಿಯೂ ಸಾಮಾನ್ಯವಾಗಿ ನಾಯಿ, ಕುರಿ, ಕೋಳಿ, ಹಂದಿ, ಹಸು, ಎಮ್ಮೆ, ಹಾವು, ಚೇಳುಗಳು, ಕೆರೆ ಕುಂಟೆಗಳು, ಹಳೆಯ ಬಾವಿಗಳು, ದೇವಸ್ಥಾಗಳು, ಒಂದಿಬ್ಬರು ಹುಚ್ಚರು, ಚಿಕ್ಕ ಮಕ್ಕಳ ಗೋಲಿ ಬುಗುರಿ ಆಟದ ಕಲರವ, ಅಜ್ಜ ಅಜ್ಜಿಯರ ಕೆಮ್ಮು, ಗಾಂಧಿ ಟೋಪಿಯವರು, ಎತ್ತಿನ ಗಾಡಿಗಳು, ಚಿಕ್ಕ ಪುಟ್ಟ ದಿನಸಿ ಅಂಗಡಿಗಳು, ಟೀ, ಕಾಫಿ ಹೋಟೆಲ್‌ಗಳು ಮುಂತಾದ ಅನೇಕ ವೈವಿಧ್ಯಮಯ ಪಾತ್ರಗಳು ಕಾಣುತ್ತಿದ್ದವು.

ಜನಸಂಖ್ಯೆಯು ಕಡಿಮೆ ಇದ್ದ ಕಾರಣ ಅಪಘಾತ, ಅನಾರೋಗ್ಯ, ಆತ್ಮಹತ್ಯೆ, ಅಪರಾಧಗಳು ಸಹ ಅಪರೂಪವೇ ಆಗಿತ್ತು. ಹಬ್ಬ, ಊರ ಜಾತ್ರೆ, ಮದುವೆಗಳು ಮಾತ್ರ ಆ ಸಮಯದ ದೊಡ್ಡ ಸಂಭ್ರಮಗಳಾಗಿದ್ದವು.

ಸುಮಾರು 1990 ರ ನಂತರ ಜಾಗತೀಕರಣ ಮತ್ತು ಮುಕ್ತ ಆರ್ಥಿಕ ವ್ಯವಸ್ಥೆಯ ಕಾರಣದಿಂದ ಶಾಲೆಗಳು, ರಸ್ತೆಗಳು, ವಾಹನಗಳು, ವಿದ್ಯುತ್, ಬ್ಯಾಂಕುಗಳು, ಪೋಲೀಸ್ ಸ್ಟೇಷನ್ನುಗಳು, ಟಿವಿಗಳು, ಸಮೂಹ ಸಂಪರ್ಕ ಮಾಧ್ಯಮಗಳು, ಮಂಡಲ ಪಂಚಾಯಿತಿ ಕಚೇರಿಗಳು, ಎಲ್ಲಾ ಹಳ್ಳಿಗಳಿಗೂ ಪ್ರವೇಶಿಸಿದವು.

ಅಲ್ಲಿಂದ ಕೇವಲ ಈ 36 ವರ್ಷಗಳಲ್ಲಿ ಭಾರತೀಯ ಜನಜೀವನದ ಗತಿಯೇ ಬದಲಾಯಿತು. ನೋಡನೋಡುತ್ತಿದ್ದಂತೆ ನಗರೀಕರಣದ ಪ್ರಭಾವಕ್ಕೆ ಎಲ್ಲವೂ ಒಳಗಾದವು. ಜೀನ್ಸ್ ಪ್ಯಾಂಟುಗಳು, ನೈಟಿಗಳು, ಇಡ್ಲಿ ವಡೆ ದೋಸೆ ಬ್ರೆಡ್ ಆಮ್ಲೆಟ್ಟುಗಳು, ಬೇಕರಿಗಳು, ಪೆಪ್ಸಿ ಕೋಲಾಗಳು, ವಿವಿಧ ರೀತಿಯ ಬಿಸ್ಕತ್ತು ಚಾಕಲೇಟುಗಳು, ನಾಮಕರಣ, ಗೃಹ ಪ್ರವೇಶ, ಎಂಗೇಜ್ ಮೆಂಟ್, ರಿಸಿಪ್ಷನ್, ಬರ್ತ್ ಡೇಗಳು, ವಾರ್ಷಿಕೋತ್ಸವಗಳು, ಪಿಕ್ ನಿಕ್ ಗಳು, ಹೊಸ ವಿನ್ಯಾಸದ ಬಣ್ಣ ಬಣ್ಣದ ಕಟ್ಟಡಗಳು, ಬಾತ್ ರೂಂ, ಬೆಡ್ ರೂಂ, ಹಾಲ್, ಕಿಚನ್ ಗಳು, ಸ್ವಿಮಿಂಗ್ ಪೂಲ್ ಗಳು ಹೀಗೆ ನಾನಾ ರೀತಿಯ ಜೀವನ ಶೈಲಿಗಳು ಜನಪ್ರಿಯವಾದವು.

ಹಾಗೆಯೇ ನಗರಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇದ್ದ ಅಪಾರ್ಟ್ ಮೆಂಟ್ ಸಂಸ್ಕೃತಿ ಬೃಹದಾಕಾರವಾಗಿ ಬೆಳೆದು ಒಂದೊಂದು ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್ ಗಳು ಒಂದು ಸಣ್ಣ ಪಟ್ಟಣಗಳಂತಾದವು. ಬೆಂಕಿ ಪೊಟ್ಟಣ ಜೋಡಿಸಿದಂತೆ ಎಲ್ಲಾ ಕಡೆಯೂ ದೂರಕ್ಕೆ ಕಣ್ಣು ಹಾಯಿಸಿದಷ್ಟೂ ಅಪಾರ್ಟ್‌ಮೆಂಟ್ ಅಪಾರ್ಟ್‌ಮೆಂಟ್ ಅಪಾರ್ಟ್‌ಮೆಂಟ್………..

ಹೆಚ್ಚಾಗಿ ಹೊರ ರಾಜ್ಯದ ಜನರಿಗೆ ಇದು ಅತ್ಯಂತ ಉಪಯುಕ್ತವಾಯಿತು. ನೂರಾರು ಮನೆಗಳಿರುವ ವಸತಿ ಸಮುಚ್ಚಯಗಳಲ್ಲಿ ಸಾವಿರಾರು ಜನ ವಾಸ ಮಾಡತೊಡಗಿದರು. ಕೆಲವೇ ಎಕರೆಗಳಷ್ಟು ಜಾಗದಲ್ಲಿ ಅಂಗಡಿ, ಹೋಟೆಲ್, ಜಿಮ್, ಈಜುಕೊಳ, ಆಟದ ಅಂಕಣ, ಸಭಾಂಗಣ, ಲೈಬ್ರರಿ, ಆಸ್ಪತ್ರೆ, ಶಾಲೆ ಮುಂತಾದ ಸೌಕರ್ಯಗಳನ್ನು ಒದಗಿಸಿರುತ್ತಾರೆ. ಜೊತೆಗೆ ಧಾರ್ಮಿಕ ಹಬ್ಬಗಳು, ರಾಷ್ಟ್ರೀಯ ಹಬ್ಬಗಳನ್ನು ಅಲ್ಲಿನ ಸಂಘದವರ ನೇತೃತ್ವದಲ್ಲಿ ಒಟ್ಟಾಗಿ ಆಚರಿಸುವ ಸಂಪ್ರದಾಯವೂ ಪ್ರಾರಂಭವಾಗಿದೆ. ಆಗಾಗ ಸಾಂಸ್ಕೃತಿಕ ಮತ್ತು ಮನೋರಂಜನಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಇಡೀ ಅಪಾರ್ಟ್‌ಮೆಂಟ್ ನಿರ್ವಹಿಸಲು ಒಂದು ಸಂಘ ಮಾಡಿಕೊಂಡು ಕ್ರಮಬದ್ದವಾದ ವ್ಯವಸ್ಥೆ ಮಾಡಿಕೊಳ್ಳುತ್ತಾರೆ.

ಒಟ್ಟಿನಲ್ಲಿ ಒಂದು ಪ್ರತ್ಯೇಕ ಊರು ಎಂದು ಕರೆಯಬಹುದಾದ ಕೆಲವು ಗುಣಲಕ್ಷಣಗಳು ಈ ಅಪಾರ್ಟ್‌ಮೆಂಟ್ ಗಳಲ್ಲಿ ಇರುತ್ತದೆ. ಆ ರೀತಿಯ ಲಕ್ಷಾಂತರ ಅಪಾರ್ಟ್‌ಮೆಂಟುಗಳು ಈಗ ಎಲ್ಲಾ ಕಡೆ ಕಾಣಸಿಗುತ್ತವೆ.

ಆ ಹೌದು, ಹಳ್ಳಿಗಳ ಜೀವಂತಿಕೆ, ಆ ಒಡನಾಟ, ಆ ಸಮೃದ್ಧ ಪ್ರಾಕೃತಿಕ ಪರಿಸರ, ಆ ಸ್ವಾಭಾವಿಕತೆ, ಸ್ಪಂದನೆ ಈ ಅಪಾರ್ಟ್‌ಮೆಂಟ್ ಗಳಲ್ಲಿ ಇರುವುದಿಲ್ಲ. ಕೃತಕತೆ, ಹಣದ ದುರಹಂಕಾರ, ಸಂಬಂಧಗಳ ನಡುವೆ ನಿರ್ಲಕ್ಷ್ಯ ಇಲ್ಲಿ ಎದ್ದು ಕಾಣುತ್ತದೆ. ಆದರೆ ಆಧುನಿಕ ಸೌಕರ್ಯಗಳು, ಆಡಂಬರ ಪ್ರದರ್ಶನದ ವೇದಿಕೆಗಳು, ವ್ಯವಹಾರಿಕ ಸಂಬಂಧಗಳು ಮುಂತಾದುವು ಅವರವರ ಆರ್ಥಿಕ ಅನುಕೂಲಕ್ಕೆ ತಕ್ಕಂತೆ ಸಿಗುತ್ತದೆ.

ಹಳ್ಳಿ ಮತ್ತು ಅಪಾರ್ಟ್‌ಮೆಂಟ್ ಗಳಲ್ಲಿ ಯಾವುದು ಹೆಚ್ಚು ನೆಮ್ಮದಿಯ ತಾಣ ಎಂದು ಹೇಳುವುದು ಅವರವರ ಮನೋಭಾವಕ್ಕೆ ಬಿಟ್ಟ ವಿಷಯ. ಆದರೆ ಬದಲಾದ ಭಾರತೀಯ ಸಮಾಜದ ಜೀವನ ವಿಧಾನವನ್ನು ಇದರಲ್ಲಿ ಗುರುತಿಸಬಹುದು.

ಕಾಲನ ಪ್ರವಾಹದಲ್ಲಿ,
ನಿರಂತರ ಪಯಣದಲ್ಲಿ,
ಬದಲಾವಣೆ ಪರ್ವದಲ್ಲಿ,
ನಾವೂ ಒಂದು ಪಾತ್ರವಾಗುತ್ತಾ ಸಾಗುವುದೇ ಬದುಕು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

2 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago