Categories: ಲೇಖನ

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ….

ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಷೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು. ಸ್ಥಳೀಯ ಹವಾಮಾನ ಮತ್ತು ಅವರವರ ಆರ್ಥಿಕ ಪರಿಸ್ಥಿತಿ ಅವಲಂಬಿಸಿ ಇದನ್ನು ನಿರ್ಮಿಸಲಾಗುತ್ತಿತ್ತು. ಎಲ್ಲೋ ಅಪರೂಪಕ್ಕೆ ಎಂಬಂತೆ ಶ್ರೀಮಂತರ ವಿಶಾಲ ಮನೆಗಳು, ಕಲ್ಲಿನ ದೊಡ್ಡ ಕಟ್ಟಡಗಳು ಕಾಣುತ್ತಿದ್ದವು. ಬ್ಯಾಂಕು, ಆಸ್ಪತ್ರೆ, ಅಂಚೆ ಕಚೇರಿ, ನಾಡ ಕಚೇರಿಗಳು, ಆರಕ್ಷಕ ಠಾಣೆಗಳು ಸಹ ಬಹುತೇಕ ಇದೇ ಮಾದರಿಯ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದವು.

ಎಲ್ಲಾ ಹಳ್ಳಿಯಲ್ಲಿಯೂ ಸಾಮಾನ್ಯವಾಗಿ ನಾಯಿ, ಕುರಿ, ಕೋಳಿ, ಹಂದಿ, ಹಸು, ಎಮ್ಮೆ, ಹಾವು, ಚೇಳುಗಳು,  ಕೆರೆ ಕುಂಟೆಗಳು, ಹಳೆಯ ಬಾವಿಗಳು, ದೇವಸ್ಥಾಗಳು, ಒಂದಿಬ್ಬರು ಹುಚ್ಚರು, ಚಿಕ್ಕ ಮಕ್ಕಳ ಗೋಲಿ ಬುಗುರಿ ಆಟದ ಕಲರವ, ಅಜ್ಜ ಅಜ್ಜಿಯರ ಕೆಮ್ಮು, ಗಾಂಧಿ ಟೋಪಿಯವರು, ಎತ್ತಿನ ಗಾಡಿಗಳು, ಚಿಕ್ಕ ಪುಟ್ಟ ದಿನಸಿ ಅಂಗಡಿಗಳು, ಟೀ ಕಾಫಿ ಹೋಟೆಲ್‌ಗಳು ಮುಂತಾದ ಅನೇಕ ವೈವಿಧ್ಯಮಯ ಪಾತ್ರಗಳು ಕಾಣುತ್ತಿದ್ದವು.

ಜನಸಂಖ್ಯೆಯು ಕಡಿಮೆ ಇದ್ದ ಕಾರಣ ಅಪಘಾತ, ಅನಾರೋಗ್ಯ, ಆತ್ಮಹತ್ಯೆ, ಅಪರಾಧಗಳು ಸಹ ಅಪರೂಪವೇ ಆಗಿತ್ತು. ಹಬ್ಬ, ಊರ ಜಾತ್ರೆ, ಮದುವೆಗಳು ಮಾತ್ರ ಆ ಸಮಯದ ದೊಡ್ಡ ಸಂಭ್ರಮಗಳಾಗಿದ್ದವು.

ಸುಮಾರು 1990 ರ ನಂತರ ಜಾಗತೀಕರಣ ಮತ್ತು ಮುಕ್ತ ಆರ್ಥಿಕ ವ್ಯವಸ್ಥೆಯ ಕಾರಣದಿಂದ ಶಾಲೆಗಳು, ರಸ್ತೆಗಳು, ವಾಹನಗಳು, ವಿದ್ಯುತ್, ಬ್ಯಾಂಕುಗಳು, ಪೋಲೀಸ್ ಸ್ಟೇಷನ್ನುಗಳು, ಟಿವಿಗಳು, ಸಮೂಹ ಸಂಪರ್ಕ ಮಾಧ್ಯಮಗಳು, ಮಂಡಲ ಪಂಚಾಯಿತಿ ಕಚೇರಿಗಳು, ಎಲ್ಲಾ ಹಳ್ಳಿಗಳಿಗೂ ಪ್ರವೇಶಿಸಿದವು.

ಅಲ್ಲಿಂದ ಕೇವಲ ಈ 30/35 ವರ್ಷಗಳಲ್ಲಿ ಭಾರತೀಯ ಜನಜೀವನದ ಗತಿಯೇ ಬದಲಾಯಿತು. ನೋಡನೋಡುತ್ತಿದ್ದಂತೆ ನಗರೀಕರಣದ ಪ್ರಭಾವಕ್ಕೆ ಎಲ್ಲವೂ ಒಳಗಾದವು. ಜೀನ್ಸ್ ಪ್ಯಾಂಟುಗಳು, ಚೆಡ್ಡಿಗಳು, ಟೀ ಶರ್ಟ್ ಗಳು, ನೈಟಿಗಳು, ಇಡ್ಲಿ ವಡೆ ದೋಸೆ ಬ್ರೆಡ್ ಆಮ್ಲೆಟ್ಟುಗಳು, ಬೇಕರಿಗಳು, ಪೆಪ್ಸಿ ಕೋಲಾಗಳು, ವಿವಿಧ ರೀತಿಯ ಬಿಸ್ಕತ್ತು ಚಾಕಲೇಟುಗಳು, ಮದುವೆ, ಬೀಗರೂಟ, ನಾಮಕರಣ, ಗೃಹ ಪ್ರವೇಶ, ಎಂಗೇಜ್ ಮೆಂಟ್, ರಿಸಿಪ್ಷನ್, ಬರ್ತ್ ಡೇಗಳು, ಪಿಕ್ ನಿಕ್ ಗಳು, ಹೊಸ ವಿನ್ಯಾಸದ ಬಣ್ಣ ಬಣ್ಣದ ಕಟ್ಟಡಗಳು, ಬಾತ್ ರೂಂ, ಬೆಡ್ ರೂಂ, ಹಾಲ್, ಕಿಚನ್ ಗಳು, ಸ್ವಿಮಿಂಗ್ ಪೂಲ್ ಗಳು ಹೀಗೆ ನಾನಾ ರೀತಿಯ ಜೀವನ ಶೈಲಿಗಳು ಜನಪ್ರಿಯವಾದವು.

ಹಾಗೆಯೇ ನಗರಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇದ್ದ ಅಪಾರ್ಟ್ ಮೆಂಟ್ ಸಂಸ್ಕೃತಿ ಬೃಹದಾಕಾರವಾಗಿ ಬೆಳೆದು ಒಂದೊಂದು ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್ ಗಳು ಒಂದು ಸಣ್ಣ ಪಟ್ಟಣಗಳಂತಾದವು. ಬೆಂಕಿ ಪೊಟ್ಟಣ ಜೋಡಿಸಿದಂತೆ ಎಲ್ಲಾ ಕಡೆಯೂ ದೂರಕ್ಕೆ ಕಣ್ಣು ಹಾಯಿಸಿದಷ್ಟೂ ಅಪಾರ್ಟ್‌ಮೆಂಟ್ ಅಪಾರ್ಟ್‌ಮೆಂಟ್ ಅಪಾರ್ಟ್‌ಮೆಂಟ್………..

ಹೆಚ್ಚಾಗಿ ಹೊರ ರಾಜ್ಯದ ಜನರಿಗೆ ಇದು ಅತ್ಯಂತ ಉಪಯುಕ್ತವಾಯಿತು. ನೂರಾರು ಮನೆಗಳಿರುವ ವಸತಿ ಸಮುಚ್ಚಯಗಳಲ್ಲಿ ಸಾವಿರಾರು ಜನ ವಾಸ ಮಾಡತೊಡಗಿದರು. ಕೆಲವೇ ಎಕರೆಗಳಷ್ಟು ಜಾಗದಲ್ಲಿ ಅಂಗಡಿ, ಹೋಟೆಲ್, ಜಿಮ್, ಈಜುಕೊಳ, ಆಟದ ಅಂಕಣ, ಸಭಾಂಗಣ, ಲೈಬ್ರರಿ, ಆಸ್ಪತ್ರೆ, ಶಾಲೆ ಮುಂತಾದ ಸೌಕರ್ಯಗಳನ್ನು ಒದಗಿಸಿರುತ್ತಾರೆ. ಜೊತೆಗೆ ಧಾರ್ಮಿಕ ಹಬ್ಬಗಳು, ರಾಷ್ಟ್ರೀಯ ಹಬ್ಬಗಳನ್ನು ಅಲ್ಲಿನ ಸಂಘದವರ ನೇತೃತ್ವದಲ್ಲಿ ಒಟ್ಟಾಗಿ ಆಚರಿಸುವ ಸಂಪ್ರದಾಯವೂ ಪ್ರಾರಂಭವಾಗಿದೆ. ಆಗಾಗ  ಸಾಂಸ್ಕೃತಿಕ ಮತ್ತು ಮನೋರಂಜನಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಇಡೀ ಅಪಾರ್ಟ್‌ಮೆಂಟ್ ನಿರ್ವಹಿಸಲು ಒಂದು ಸಂಘ ಮಾಡಿಕೊಂಡು ಕ್ರಮಬದ್ದವಾದ ವ್ಯವಸ್ಥೆ ಮಾಡಿಕೊಳ್ಳುತ್ತಾರೆ.

ಒಟ್ಟಿನಲ್ಲಿ ಒಂದು ಪ್ರತ್ಯೇಕ ಊರು ಎಂದು ಕರೆಯಬಹುದಾದ ಕೆಲವು ಗುಣಲಕ್ಷಣಗಳು ಈ ಅಪಾರ್ಟ್‌ಮೆಂಟ್ ಗಳಲ್ಲಿ ಇರುತ್ತದೆ. ಆ ರೀತಿಯ ಲಕ್ಷಾಂತರ ಅಪಾರ್ಟ್‌ಮೆಂಟುಗಳು ಈಗ ಎಲ್ಲಾ ಕಡೆ ಕಾಣಸಿಗುತ್ತವೆ.

ಆ ಹೌದು, ಹಳ್ಳಿಗಳ ಜೀವಂತಿಕೆ, ಆ ಒಡನಾಟ, ಆ ಸಮೃದ್ಧ ಪ್ರಾಕೃತಿಕ ಪರಿಸರ, ಆ ಸ್ವಾಭಾವಿಕತೆ, ಸ್ಪಂದನೆ ಈ ಅಪಾರ್ಟ್‌ಮೆಂಟ್ ಗಳಲ್ಲಿ ಇರುವುದಿಲ್ಲ. ಕೃತಕತೆ,ಹಣದ ದುರಹಂಕಾರ, ಸಂಬಂಧಗಳ ನಡುವೆ ನಿರ್ಲಕ್ಷ್ಯ ಇಲ್ಲಿ ಎದ್ದು ಕಾಣುತ್ತದೆ. ಆದರೆ ಆಧುನಿಕ ಸೌಕರ್ಯಗಳು, ಆಡಂಬರ ಪ್ರದರ್ಶನದ ವೇದಿಕೆಗಳು, ವ್ಯವಹಾರಿಕ ಸಂಬಂಧಗಳು ಮುಂತಾದುವು ಅವರವರ ಆರ್ಥಿಕ ಅನುಕೂಲಕ್ಕೆ ತಕ್ಕಂತೆ ಸಿಗುತ್ತದೆ.

ಹಳ್ಳಿ ಮತ್ತು ಅಪಾರ್ಟ್‌ಮೆಂಟ್ ಗಳಲ್ಲಿ ಯಾವುದು ಹೆಚ್ಚು ನೆಮ್ಮದಿಯ ತಾಣ ಎಂದು ಹೇಳುವುದು ಅವರವರ ಮನೋಭಾವಕ್ಕೆ ಬಿಟ್ಟ ವಿಷಯ. ಆದರೆ ಬದಲಾದ ಭಾರತೀಯ ಸಮಾಜದ ಜೀವನ ವಿಧಾನವನ್ನು ಇದರಲ್ಲಿ ಗುರುತಿಸಬಹುದು.

ಕಾಲನ ಪ್ರವಾಹದಲ್ಲಿ,

ನಿರಂತರ ಪಯಣದಲ್ಲಿ,

ಬದಲಾವಣೆ ಪರ್ವದಲ್ಲಿ,

ನಾವೂ ಒಂದು ಪಾತ್ರವಾಗುತ್ತಾ ಸಾಗುವುದೇ ಬದುಕು…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago