ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಷೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು. ಸ್ಥಳೀಯ ಹವಾಮಾನ ಮತ್ತು ಅವರವರ ಆರ್ಥಿಕ ಪರಿಸ್ಥಿತಿ ಅವಲಂಬಿಸಿ ಇದನ್ನು ನಿರ್ಮಿಸಲಾಗುತ್ತಿತ್ತು. ಎಲ್ಲೋ ಅಪರೂಪಕ್ಕೆ ಎಂಬಂತೆ ಶ್ರೀಮಂತರ ವಿಶಾಲ ಮನೆಗಳು, ಕಲ್ಲಿನ ದೊಡ್ಡ ಕಟ್ಟಡಗಳು ಕಾಣುತ್ತಿದ್ದವು. ಬ್ಯಾಂಕು, ಆಸ್ಪತ್ರೆ, ಅಂಚೆ ಕಚೇರಿ, ನಾಡ ಕಚೇರಿಗಳು, ಆರಕ್ಷಕ ಠಾಣೆಗಳು ಸಹ ಬಹುತೇಕ ಇದೇ ಮಾದರಿಯ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದವು.
ಎಲ್ಲಾ ಹಳ್ಳಿಯಲ್ಲಿಯೂ ಸಾಮಾನ್ಯವಾಗಿ ನಾಯಿ, ಕುರಿ, ಕೋಳಿ, ಹಂದಿ, ಹಸು, ಎಮ್ಮೆ, ಹಾವು, ಚೇಳುಗಳು, ಕೆರೆ ಕುಂಟೆಗಳು, ಹಳೆಯ ಬಾವಿಗಳು, ದೇವಸ್ಥಾಗಳು, ಒಂದಿಬ್ಬರು ಹುಚ್ಚರು, ಚಿಕ್ಕ ಮಕ್ಕಳ ಗೋಲಿ ಬುಗುರಿ ಆಟದ ಕಲರವ, ಅಜ್ಜ ಅಜ್ಜಿಯರ ಕೆಮ್ಮು, ಗಾಂಧಿ ಟೋಪಿಯವರು, ಎತ್ತಿನ ಗಾಡಿಗಳು, ಚಿಕ್ಕ ಪುಟ್ಟ ದಿನಸಿ ಅಂಗಡಿಗಳು, ಟೀ ಕಾಫಿ ಹೋಟೆಲ್‌ಗಳು ಮುಂತಾದ ಅನೇಕ ವೈವಿಧ್ಯಮಯ ಪಾತ್ರಗಳು ಕಾಣುತ್ತಿದ್ದವು.
ಜನಸಂಖ್ಯೆಯು ಕಡಿಮೆ ಇದ್ದ ಕಾರಣ ಅಪಘಾತ, ಅನಾರೋಗ್ಯ, ಆತ್ಮಹತ್ಯೆ, ಅಪರಾಧಗಳು ಸಹ ಅಪರೂಪವೇ ಆಗಿತ್ತು. ಹಬ್ಬ, ಊರ ಜಾತ್ರೆ, ಮದುವೆಗಳು ಮಾತ್ರ ಆ ಸಮಯದ ದೊಡ್ಡ ಸಂಭ್ರಮಗಳಾಗಿದ್ದವು.
ಸುಮಾರು 1990 ರ ನಂತರ ಜಾಗತೀಕರಣ ಮತ್ತು ಮುಕ್ತ ಆರ್ಥಿಕ ವ್ಯವಸ್ಥೆಯ ಕಾರಣದಿಂದ ಶಾಲೆಗಳು, ರಸ್ತೆಗಳು, ವಾಹನಗಳು, ವಿದ್ಯುತ್, ಬ್ಯಾಂಕುಗಳು, ಪೋಲೀಸ್ ಸ್ಟೇಷನ್ನುಗಳು, ಟಿವಿಗಳು, ಸಮೂಹ ಸಂಪರ್ಕ ಮಾಧ್ಯಮಗಳು, ಮಂಡಲ ಪಂಚಾಯಿತಿ ಕಚೇರಿಗಳು, ಎಲ್ಲಾ ಹಳ್ಳಿಗಳಿಗೂ ಪ್ರವೇಶಿಸಿದವು.
ಅಲ್ಲಿಂದ ಕೇವಲ ಈ 30/35 ವರ್ಷಗಳಲ್ಲಿ ಭಾರತೀಯ ಜನಜೀವನದ ಗತಿಯೇ ಬದಲಾಯಿತು. ನೋಡನೋಡುತ್ತಿದ್ದಂತೆ ನಗರೀಕರಣದ ಪ್ರಭಾವಕ್ಕೆ ಎಲ್ಲವೂ ಒಳಗಾದವು. ಜೀನ್ಸ್ ಪ್ಯಾಂಟುಗಳು, ಚೆಡ್ಡಿಗಳು, ಟೀ ಶರ್ಟ್ ಗಳು, ನೈಟಿಗಳು, ಇಡ್ಲಿ ವಡೆ ದೋಸೆ ಬ್ರೆಡ್ ಆಮ್ಲೆಟ್ಟುಗಳು, ಬೇಕರಿಗಳು, ಪೆಪ್ಸಿ ಕೋಲಾಗಳು, ವಿವಿಧ ರೀತಿಯ ಬಿಸ್ಕತ್ತು ಚಾಕಲೇಟುಗಳು, ಮದುವೆ, ಬೀಗರೂಟ, ನಾಮಕರಣ, ಗೃಹ ಪ್ರವೇಶ, ಎಂಗೇಜ್ ಮೆಂಟ್, ರಿಸಿಪ್ಷನ್, ಬರ್ತ್ ಡೇಗಳು, ಪಿಕ್ ನಿಕ್ ಗಳು, ಹೊಸ ವಿನ್ಯಾಸದ ಬಣ್ಣ ಬಣ್ಣದ ಕಟ್ಟಡಗಳು, ಬಾತ್ ರೂಂ, ಬೆಡ್ ರೂಂ, ಹಾಲ್, ಕಿಚನ್ ಗಳು, ಸ್ವಿಮಿಂಗ್ ಪೂಲ್ ಗಳು ಹೀಗೆ ನಾನಾ ರೀತಿಯ ಜೀವನ ಶೈಲಿಗಳು ಜನಪ್ರಿಯವಾದವು.
ಹಾಗೆಯೇ ನಗರಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇದ್ದ ಅಪಾರ್ಟ್ ಮೆಂಟ್ ಸಂಸ್ಕೃತಿ ಬೃಹದಾಕಾರವಾಗಿ ಬೆಳೆದು ಒಂದೊಂದು ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್ ಗಳು ಒಂದು ಸಣ್ಣ ಪಟ್ಟಣಗಳಂತಾದವು. ಬೆಂಕಿ ಪೊಟ್ಟಣ ಜೋಡಿಸಿದಂತೆ ಎಲ್ಲಾ ಕಡೆಯೂ ದೂರಕ್ಕೆ ಕಣ್ಣು ಹಾಯಿಸಿದಷ್ಟೂ ಅಪಾರ್ಟ್‌ಮೆಂಟ್ ಅಪಾರ್ಟ್‌ಮೆಂಟ್ ಅಪಾರ್ಟ್‌ಮೆಂಟ್………..
ಒಟ್ಟಿನಲ್ಲಿ ಒಂದು ಪ್ರತ್ಯೇಕ ಊರು ಎಂದು ಕರೆಯಬಹುದಾದ ಕೆಲವು ಗುಣಲಕ್ಷಣಗಳು ಈ ಅಪಾರ್ಟ್‌ಮೆಂಟ್ ಗಳಲ್ಲಿ ಇರುತ್ತದೆ. ಆ ರೀತಿಯ ಲಕ್ಷಾಂತರ ಅಪಾರ್ಟ್‌ಮೆಂಟುಗಳು ಈಗ ಎಲ್ಲಾ ಕಡೆ ಕಾಣಸಿಗುತ್ತವೆ.
ಆ ಹೌದು, ಹಳ್ಳಿಗಳ ಜೀವಂತಿಕೆ, ಆ ಒಡನಾಟ, ಆ ಸಮೃದ್ಧ ಪ್ರಾಕೃತಿಕ ಪರಿಸರ, ಆ ಸ್ವಾಭಾವಿಕತೆ, ಸ್ಪಂದನೆ ಈ ಅಪಾರ್ಟ್‌ಮೆಂಟ್ ಗಳಲ್ಲಿ ಇರುವುದಿಲ್ಲ. ಕೃತಕತೆ,ಹಣದ ದುರಹಂಕಾರ, ಸಂಬಂಧಗಳ ನಡುವೆ ನಿರ್ಲಕ್ಷ್ಯ ಇಲ್ಲಿ ಎದ್ದು ಕಾಣುತ್ತದೆ. ಆದರೆ ಆಧುನಿಕ ಸೌಕರ್ಯಗಳು, ಆಡಂಬರ ಪ್ರದರ್ಶನದ ವೇದಿಕೆಗಳು, ವ್ಯವಹಾರಿಕ ಸಂಬಂಧಗಳು ಮುಂತಾದುವು ಅವರವರ ಆರ್ಥಿಕ ಅನುಕೂಲಕ್ಕೆ ತಕ್ಕಂತೆ ಸಿಗುತ್ತದೆ.
ಹಳ್ಳಿ ಮತ್ತು ಅಪಾರ್ಟ್‌ಮೆಂಟ್ ಗಳಲ್ಲಿ ಯಾವುದು ಹೆಚ್ಚು ನೆಮ್ಮದಿಯ ತಾಣ ಎಂದು ಹೇಳುವುದು ಅವರವರ ಮನೋಭಾವಕ್ಕೆ ಬಿಟ್ಟ ವಿಷಯ. ಆದರೆ ಬದಲಾದ ಭಾರತೀಯ ಸಮಾಜದ ಜೀವನ ವಿಧಾನವನ್ನು ಇದರಲ್ಲಿ ಗುರುತಿಸಬಹುದು.
ಕಾಲನ ಪ್ರವಾಹದಲ್ಲಿ,
ನಿರಂತರ ಪಯಣದಲ್ಲಿ,
ಬದಲಾವಣೆ ಪರ್ವದಲ್ಲಿ,
ನಾವೂ ಒಂದು ಪಾತ್ರವಾಗುತ್ತಾ ಸಾಗುವುದೇ ಬದುಕು…..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…