ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ. ಗ್ರಾ. ಜಿಲ್ಲೆಗೆ 4ನೇ ಸ್ಥಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಗುರಿ ಮೀರಿ ಸಾಧನೆಮಾಡಿದ್ದು, ನರೇಗಾ ಯೋಜನೆಯಡಿ 4ನೇ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ 14ನೇ ಸ್ಥಾನದಲ್ಲಿತ್ತು. ಆರ್ಥಿಕ ವರ್ಷ 2024-25ನೇ ಸಾಲಿನಲ್ಲಿ 14 ಲಕ್ಷ ಗುರಿಗೆ 16,310 ಲಕ್ಷ ಮಾನವ ದಿನಗಳ ಸೃಜನೆ ಮಾಡಿ ಶೇ 116.50% ಪ್ರಗತಿಯನ್ನು ಸಾಧಿಸಿದೆ. ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಆಸ್ತಿಗಳ ಸೃಜನೆ ಮಾಡುವ ಮೂಲಕ ಗ್ರಾಮೀಣ ಜನರ ಸಬಲೀಕರಣಕ್ಕೆ ಹೆಚ್ಚಿನ ಅದ್ಯತೆಯನ್ನು ನೀಡಿ, ಗುರಿಯನ್ನು ಮಿರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4ನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್‌ಅನುರಾಧ ಹೇಳಿದ್ದಾರೆ.

ಈ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆಯಲ್ಲಿ ತಾಲ್ಲೂಕುವಾರು ಪ್ರಗತಿಯನ್ನು ಸಾಧಿಸಿದೆ, ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ ತಾಲ್ಲೂಕು ಶೇ 104.19%, ಹೊಸಕೋಟೆ ತಾಲ್ಲೂಕು 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% ಪ್ರಗತಿಯನ್ನು ಸಾಧಿಸಿದೆ. ಸದರಿ ಯೋಜನೆಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, ಅದರಲ್ಲಿ 2,61,128 ಜನರು ಕೂಲಿಕಾರರಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಯೋಜನೆಯಲ್ಲಿ ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಅರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ, ಸಾಮಾಜಿಕ ಅರಣ್ಯ ಇಲಾಖೆ, ಪಂಚಾಯತ್‌ ರಾಜ್‌ ಇಂಜನಿಯರಿಂಗ್‌ (ಪಿಆರ್‌ಇಡಿ) ಇಲಾಖೆಗಳು ಮಹತ್ವದ ಪಾತ್ರವನ್ನು ವಹಿಸಿವೆ, ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಚಟುವಟಿಕೆಗಳು ಸಮಗ್ರವಾಗಿ ಶಾಲಾಭಿವೃದ್ಧಿ, ಸ್ಮಶಾನ, ಚರಂಡಿ, ಬೂದು ನೀರು ನಿರ್ವಹಣೆ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ, ಸಂಜೀವಿನಿ ಭವನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM)ಗಳ ಅಭಿವೃದ್ದಿ ಸಹಕಾರಿಯಾಗಿದೆ. ಹಾಗೇ ವೈಯಕ್ತಿಕ ಕಾಮಗಾರಿಗಳಾದ ಹಸುಶೆಡ್‌, ಕುರಿಶೆಡ್‌, ಹಂದಿಶೆಡ್‌, ಕೋಳಿಶೆಡ್‌, ವಸತಿ ಯೋಜನೆಯ ಫಲಾನುಭವಿಗಳು, ವಿಶೇಷ ಚೇತನರು, ಹಿರಿಯ ನಾಗರಿಕರು ಮತ್ತು ಗರ್ಭಿಣಿ ಸ್ತ್ರೀಯರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಸ್ವಚ್ಚ ಭಾರತ್‌ ಮಿಷನ್‌ ಮತ್ತು ಬೂದು ನೀರು ನಿರ್ವಹಣೆ ಗ್ರಾಮೀಣ ಯೋಜನೆ ಅಧೀನದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂಲಕ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ನರೇಗಾ ಮೂಲಕವೂ ವಿಶೇಷ ಯೋಜನೆ ರೂಪಿಸಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ.

ಮಹಿಳಾ ಸಬೀಕರಣಕ್ಕೆ ಸಹಕಾರಿಯಾದ ನರೇಗಾ ಯೋಜನೆಯಡಿ ಮಹಿಳೆಯರು ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ, ಅರ್ಥಿಕ ವರ್ಷ 2024-25ನೇ ಸಾಲಿನಲ್ಲಿ ಶೇ 51.97% ಪ್ರಗತಿಯನ್ನು ಸಾಧಿಸಲಾಗಿರುತ್ತದೆ. ಮುಖ್ಯವಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ.

*ಸ್ತ್ರೀ ಚೇತನ, ದುಡಿಯೋಣ ಬಾ ಅಭಿಯಾನ*

ಮಹಿಳೆಯರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವುದಕ್ಕೆ ಏಪ್ರಿಲ್‌ 1ರಿಂದ ಜೂನ್‌ 30 ರವರೆಗೆ ಮೂರು ತಿಂಗಳ ಕಾಲ ಅಭಿಯಾನವನ್ನು ಹಮ್ಮಿಕೊಂದಿದೆ. ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸ್ತ್ರೀಚೇತನ ಮತ್ತು ದುಡಿಯೋಣ ಬಾ ಅಭಿಯಾನ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಶೇ60% ಗುರಿ ಸಾಧಿಸಲು, ಕರಪತ್ರ ವಿತರಣೆ, ಮನೆ ಮನೆಗೆ ಭೇಟಿ, ಆಟೋ ಮೂಲಕ ಪ್ರಚಾರ ಮಾಡುವುದು, ವಾರ್ಡ್‌ಗಳಲ್ಲಿ ಸಭೆ ಮಾಡುವುದು, ಗ್ರಾಮಗಳಲ್ಲಿನ ಸಭೆ ಮೂಲಕ ಇನ್ನೂ ಹೆಚ್ಚಿನ ಪ್ರಚಾರ ಮಾಡಲು ಯೋಜನೆ ರೂಪಿಸಿ 101 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಆರ್ಥಿಕ ವರ್ಷ 2025-26 ನೇ ಸಾಲಿನಲ್ಲಿ 15ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ಹೊಂದಲಾಗಿದ್ದು. ಗ್ರಾಮ ಪಂಚಾಯಿತಿಗಳಿಂದ ಬಂದಂತಹ ಯೋಜನೆಗಳಿಗೆ ರಾಜ್ಯದಿಂದ ಅನುಮೊದನೆಯನ್ನು ಪಡೆದುಕೊಂಡು ಕಾಮಗಾರಿಗಳಿಗೆ ನಿಯಮಾನುಸಾರ ಚಾಲನೆ ನೀಡಲಾಗಿರುತ್ತದೆ. ನೈಸರ್ಗಿಕ ಸಂಪನ್ಮೂಲಗಳಾದ ಜಲ ಸಂರಕ್ಷಣೆ, ಅರಣ್ಯೀಕರಣ, ಗ್ರಾಮಗಳ ಸ್ವಚ್ಚತೆ ಮತ್ತು ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು  ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್‌ ಹೇಳಿದ್ದಾರೆ.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

8 minutes ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

18 minutes ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

2 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

2 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

5 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

13 hours ago