ಹಳ್ಳಿ ಗುಗ್ಗುಗಳ ಶಕ್ತಿ ಏನೆಂಬುದು ಸರ್ಕಾರಕ್ಕೆ ತೋರಿಸುತ್ತೇವೆ- ಹರೀಶ್ ಗೌಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ಅವ್ಯವಸ್ಥೆ ಖಂಡಿಸಿ ಜೆಡಿಎಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಹಳೆಯ ಬಸ್ ನಿಲ್ದಾಣ ರಸ್ತೆಯ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲ್ಲೂಕು ಕಚೇರಿ ವೃತ್ತದವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ತಹಶೀಲ್ದಾರರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಾರ್ಖಾನೆಗಳಿಗೆ ವಿದ್ಯುತ್ ನೀಡುವ ಸರ್ಕಾರಕ್ಕೆ ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ರೈತರಿಗೆ ದಿನಕ್ಕೆ ಕೇವಲ ಮೂರರಿಂದ ನಾಲ್ಕು ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದರಿಂದ ಬೆಳೆಗಳು ಒಣಗುವ ಆತಂಕ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಐಎಡಿಬಿ ಮೂಲಕ ಮನಸೋಇಚ್ಛೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಕೆಐಎಡಿಬಿ ಸಂಸ್ಥೆಯು ಒಂದು ರೀತಿಯಲ್ಲಿ ರಿಯಲ್ ಎಸ್ಟೇಟ್ ದಂಧೆಯಾಗಿ ಮಾರ್ಪಟ್ಟಿದೆ. ನಮ್ಮನ್ನು ಹಳ್ಳಿ ಗುಗ್ಗು ಎಂದು ಕರೆಯುತ್ತಾರೆ. ಆದರೆ ಇದೇ ಹಳ್ಳಿ ಗುಗ್ಗುಗಳಿಗೆ ಸರ್ಕಾರದ ಕುರ್ಚಿ ಅಲುಗಾಡಿಸುವ ಶಕ್ತಿ ಇದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾಗುತ್ತಿದ್ದರೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಹಳ್ಳಿಗಳು ಹಾಗೂ ನಗರ ಪ್ರದೇಶಗಳ ಹಲವು ಭಾಗಗಳಲ್ಲಿ ಇಂದಿಗೂ ಸಮರ್ಪಕ ರಸ್ತೆಗಳಿಲ್ಲ. ಜನಸಾಮಾನ್ಯರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆಯಿಂದ ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಬಡ ಕುಟುಂಬಗಳ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಿಂದಲೂ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಕೃಷಿ ಇಲಾಖೆಯಲ್ಲಿ ರೈತರಿಗೆ ದೊರೆಯಬೇಕಾದ ಸಬ್ಸಿಡಿ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಇಲಾಖೆಯಲ್ಲಿನ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ದೊಡ್ಡಬಳ್ಳಾಪುರ ತಾಲೂಕಿನ ಕೈಗಾರಿಕೆಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸದೆ ಹೊರರಾಜ್ಯದವರಿಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸ್ಥಳೀಯ ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಕಂದಾಯ ಇಲಾಖೆಯಲ್ಲಿನ ಅವ್ಯವಸ್ಥೆ, ಸ್ಲಂ ನಿವಾಸಿಗಳು ಹಾಗೂ ಮೀನುಗಾರರಿಗೆ ಮೂಲಭೂತ ಸೌಲಭ್ಯಗಳ ಕೊರತೆ, ಹಿರಿಯ ರಾಜಕಾರಣಿಗಳ ಸ್ಟಿಂಗ್ ಆಪರೇಷನ್ ವಿಚಾರದಲ್ಲಿನ ಬೆಳವಣಿಗೆಗಳು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ರೈತರು, ಕಾರ್ಮಿಕರು, ಬಡವರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಜೆಡಿಎಸ್ ಉಪಾಧ್ಯಕ್ಷ ಆನಂದ್, ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜು, ಮುಖಂಡರಾದ ಪ್ರವೀಣ್ ಶಾಂತಿನಗರ, ಮಹೇಶ್ ಗೌಡ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

₹50 ಸಾವಿರ ಲಂಚ ಸ್ವೀಕರಿಸುವಾಗ ನಗರಸಭೆ ಆಯುಕ್ತ ಎಸಿಬಿ ಬಲೆಗೆ: ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ; ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಹಣ ಪತ್ತೆ

ನಿರ್ಮಲ್: ಗುತ್ತಿಗೆದಾರನಿಗೆ ಬಾಕಿ ಉಳಿದಿದ್ದ ಕಾಮಗಾರಿಗಳ ಹಣ ಬಿಡುಗಡೆ ಮಾಡಲು ₹50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಭೈಂಸಾ ನಗರಸಭೆಯ ಪ್ರಭಾರ…

12 hours ago

ಸರ್ಕಾರದ ನೀತಿಗಳ ವಿರುದ್ಧ ನಾಳೆ ಜೆಡಿಎಸ್ ಬೃಹತ್ ಪ್ರತಿಭಟನೆ: ಬಸ್ ಪ್ರಯಾಣ ದರ ಏರಿಕೆ, ವಿದ್ಯುತ್ ಸಮಸ್ಯೆ, ರೈತರ ನಿರ್ಲಕ್ಷ್ಯ ಖಂಡಿಸಿ ಹೋರಾಟ- ಹರೀಶ್ ಗೌಡ

ದೊಡ್ಡಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಖಂಡಿಸಿ…

1 day ago

ರೈತ ಮಹಿಳೆಯರ ಸ್ವಾವಲಂಬನೆಗೆ ಕ್ಷೀರ ಸಂಜೀವಿನಿ ಆಸರೆ- ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತ ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಮೂಲ್ ನಿರ್ದೇಶಕ…

2 days ago

ಮೂರನೇ ಮದುವೆಗೂ ಗುಡ್‌ಬೈ ಹೇಳಿದ ಪವನ್ ಕಲ್ಯಾಣ್!

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಅವರ ವೈಯಕ್ತಿಕ ಬದುಕಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪವನ್ ಕಲ್ಯಾಣ್ ಕೊನಿಡೆಲಾ…

2 days ago

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ…

2 days ago

ಹಾಲಿನ ಬೆಲೆ ಏರಿಕೆ ವಿರೋಧಿಸುವವರಿಗೆ ನೈತಿಕತೆ ಇಲ್ಲ-ರೈತಪರ ನಿರ್ಧಾರಕ್ಕೆ ರಾಜಕೀಯ ಬಣ್ಣ ಬೇಡ – ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸಿರುವ ನಿರ್ಧಾರವನ್ನು ವಿರೋಧಿಸುವುದು ಸರಿಯಲ್ಲ.…

2 days ago