ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಅಧಿ ಸೂಚನೆ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಅಧಿಸೂಚಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಬೆಳೆ ವಿಮಾ ಯೋಜನೆ, ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಡಾ. ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕುವಾರು ಬೆಳೆಗಳು
ನೆಲಮಂಗಲ: ಮಾವು,
ದೇವನಹಳ್ಳಿ: ದ್ರಾಕ್ಷಿ, ಮಾವು
ದೊಡ್ಡಬಳ್ಳಾಪುರ: ದ್ರಾಕ್ಷಿ, ಮಾವು
ಹೊಸಕೋಟೆ: ದ್ರಾಕ್ಷಿ, ಮಾವು
ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂ ಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದ್ರಾಕ್ಷಿ ಮತ್ತು ಮಾವು ಬೆಳೆಯುವ ರೈತ ಬಾಂಧವರು ಸದರಿ ಯೋಜನೆಯಡಿ ನೊಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.
ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯ ರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು Fruits ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ಸದರಿ ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.
ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಸದರಿ ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.
ಬೆಳೆ ವಿಮಾ ಕಂತಿನ ವಿವರಗಳು
ದೊಡ್ಡಬಳ್ಳಾಪುರ, ದೇವನಹಳ್ಳಿ ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಮಾವು ಬೆಳೆಗೆ
ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 80,000. ರೈತರು ಪಾವತಿಸಬೇಕಾದ ದರ ಶೇಕಡಾ (5%) ರೂಗಳಲ್ಲಿ 4,000.
ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ ವಿಮಾ ಮೊತ್ತ ₹ 2,80,000/, ರೈತರು ಪಾವತಿಸಬೇಕಾದ ದರ ಶೇಕಡಾ (5%) ರೂ. ಗಳಲ್ಲಿ ₹14,000.
ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ31ಕ್ಕೆ ಕಡೆ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೇವನಹಳ್ಳಿ
9448825101.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೊಡ್ಡಬಳ್ಳಾಪುರ
9880210892.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಹೊಸಕೋಟೆ
8217210320.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ನೆಲಮಂಗಲ
9880461607.
ವಿಮಾ ಕಂಪನಿಯ ದೂರವಾಣಿ ಸಂಖ್ಯೆ — 9966222561 ಸಹಾಯವಾಣಿ ಸಂಖ್ಯೆ-18004250505 ಸಂಪರ್ಕಿಸಬಹುದು.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…