ಹವಾಮಾನ ಆಧಾರಿತ ಬೆಳೆ ವಿಮೆಗೆ ನೋಂದಾಯಿಸಿ

2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನ ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000, ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000 ಮಾವು ಮತ್ತು ದ್ರಾಕ್ಷಿ ಬೆಳೆಯುವ ರೈತ ಬಾಂಧವರು ಈ ಯೋಜನೆಯಡಿ ನೊಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.
ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಕಂದಾಯ ರಶೀದಿ, ಖಾತೆ ಪುಸ್ತಕ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸುವುದು.

ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.
ಹೆಚ್ಚಿನ ಮಾಹಿತಿಗೆ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9480461234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880210892, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 8217210320, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880461607, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯ ಸಹಾಯವಾಣಿ ಸಂಖ್ಯೆ- 08026564537 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

4 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

8 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

11 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

13 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago