ಹವಾಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಚಾ ಸೈಕ್ಲೋನ್ ನಂತರ ಬಿಪರ್‌ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ಬಿಪರ್‌ಜಾಯ್ ಎಫೆಕ್ಟ್ ನಾಳೆಯಿಂದ ಜೂನ್ 10ರವರೆಗೆ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಮೂರು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ.
ಈ ಸೈಕ್ಲೋನ್ ವೇಗ ಆರಂಭದಲ್ಲಿ ಪ್ರತಿ ಗಂಟೆಗೆ 45-55 ಕಿಲೋ ಮೀಟರ್ ಇರಲಿದೆ ಎನ್ನಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕರ್ನಾಟಕದ ದಕ್ಷಿಣ ಒಳನಾಡ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರಿ ಅಲೆ ಎಚ್ಚರಿಕೆ ಸಹ ಇದೆ.
ಚಂಡಮಾರುತ ಹಿನ್ನೆಲೆ, ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ, ಈ ಹಿಂದೆ ಜೂನ್ 3, 4ನೇ ತಾರೀಖು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ತಿಳಿಸಿದ್ದ ಹವಾಮಾನ ಇಲಾಖೆ, ಸದ್ಯ ಚಂಡಮಾರುತ ಹಿನ್ನೆಲೆ, ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ
ಉತ್ತರ ಒಳನಾಡು
ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ
ದಕ್ಷಿಣ ಒಳನಾಡು
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆ
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…