ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ನೆರೆ ಸೃಷ್ಟಿಯಾದರೆ, ಕೆಲವೊಂದು ಕಡೆ ಜಡಿ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂ ಗಿಡಗಳಿಗೆ ರೋಗ ಕಾಟ ಸೇರಿದಂತೆ ಇತರೆ ಸಮಸ್ಯೆಗಳು ಶುರುವಾಗಿದೆ. ಶ್ರಾವಣದಲ್ಲಿ ಉತ್ತಮ ದರ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸನ್ನ ಊಜಿ ಸೇರಿದಂತೆ ಹಾನಿಕಾರಕ ಕೀಟಗಳು ಭಗ್ನಗೊಳಿಸಿವೆ.
ಹೌದು.. ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡದ ಬುಡಗಳು ಕೊಳೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾಗುತ್ತದೆ. ಮಾರುಕಟ್ಟೆಯಲ್ಲಿ ಉತ್ತಮ ದರ ಸಿಕ್ಕಿ ಮಾಡಿದ ಸಾಲ ಎಲ್ಲಾ ತೀರಿಸಿಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದುಕಡೆ ಜಡಿ ಮಳೆ, ಮತ್ತೊಂದು ಕಡೆ ಆಷಾಢ ಗಾಳಿ, ಮಳೆ ಶಾಕ್ ಕೊಟ್ಟಿದೆ. ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೆ ಬೀಳುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡಗಳ ಬುಡಗಳು ಕೊಳೆಯುತ್ತಿವೆ. ಜೊತೆಗೆ ಹೂವಿಗೆ ಕಪ್ಪುರೋಗ ಬಂದು ಮಂಕುಬಡಿದಂತೆ ಆಗಿದೆ. ಹಾಗಾಗಿ ರೈತರು ಕಣ್ಣು ಮುಂದೆಯೇ ಹೂ ಗಿಡಗಳನ್ನು ಕಿತ್ತು ಹಾಕಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನೇನು ಬೆಳೆದ ಬೆಳೆ ನಮ್ಮ ಕೈ ಸೇರುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸಿಗೆ ಕೀಟಗಳು ತಣ್ಣೀರು ಎರಚಿವೆ.
ಒಟ್ಟಾರೆ ಉತ್ತಮ ಫಸಲು ಬಂದಾಗ ರೇಟ್ ಇರಲ್ಲ, ರೇಟ್ ಇದ್ದಾಗ ಫಸಲು ಇರಲ್ಲ, ಎರಡು ಇದ್ದಾಗ ಈ ರೀತಿ ಹವಾಮಾನ ವೈಪರೀತ್ಯಗಳಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇನ್ನಾದರು ಅಧಿಕಾರಿಗಳು ರೈತರ ತೋಟಗಳತ್ತ ಮುಖ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…