ಹಸಿರುಮನೆ ನಿರ್ಮಾಣ ಘಟಕಕ್ಕೆ ಸಹಾಯಧನ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ  24 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅನುಮೋದನೆಗೊಂಡಿರುತ್ತದೆ.

ಒಂದು ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಫಲಾನುಭವಿಗೆ ಸವಲತ್ತನ್ನು ಮಿತಿಗೊಳಿಸಿದ್ದು, ಅನುದಾನವು ಲಭ್ಯವಿದ್ದಲ್ಲಿ ಒಂದಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಸವಲತ್ತನ್ನು ನೀಡಬಹುದಾಗಿರುತ್ತದೆ.

2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಆಯ್ಕೆಯಾದ 24 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ದೇವನಹಳ್ಳಿ ತಾಲ್ಲೂಕಿನ ಗೊಡ್ಲುಮುದ್ದೇನಹಳ್ಳಿ, ಯಲಿಯೂರು, ಕೊಯಿರಾ ಗ್ರಾಮ ಪಂಚಾಯಿತಿಗಳಲ್ಲಿ.

ನೆಲಮಂಗಲ ತಾಲೂಕಿನ ಶ್ರೀನಿವಾಸಪುರ, ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ.

ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ, ದೊಡ್ಡಗಟ್ಟಿಗನಬ್ಬೆ, ದೊಡ್ಡ ಅರಳಗೆರೆ, ಗಣಗಲೂರು, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ಗ್ರಾಮ ಪಂಚಾಯಿತಿಗಳಲ್ಲಿ.

ದೊಡ್ಡಬಳ್ಳಾಪುರ ತಾಲ್ಲೂಕಿನ ಅರುಳು ಮಲ್ಲಿಗೆ, ಆರೂಡಿ, ಚನ್ನಾದೇವಿ ಅಗ್ರಹಾರ, ಹಾಡೋನಹಳ್ಳಿ, ಹೊನ್ನಾವರ, ಹೊಸಹಳ್ಳಿ, ಹುಲಿಕುಂಟೆ, ಕನಸವಾಡಿ, ಕೆಸ್ತೂರು, ಕೊನ್ನಘಟ್ಟ, ಮಾಜರ ಹೊಸಹಳ್ಳಿ, ರಾಜಘಟ್ಟ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ/ಕೀಟ ಬಾಧೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ ಹಾಗೂ ಅಧಿಕ ಮೌಲ್ಯದ ತರಕಾರಿ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ ನೀಡಲಾಗುವುದು.

ಹಸಿರುಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಆಸಕ್ತವಿರುವ ರೈತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಫಲಾನುಭವಿಯ ಭಾವಚಿತ್ರ ಹಾಗೂ ಪ್ರಸಕ್ತ ಸಾಲಿನ ಪಹಣಿ (RTC)ಯೊಂದಿಗೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರವರ ಕಚೇರಿಗೆ ಜೂನ್‌.17ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ: 9880210892, ದೇವನಹಳ್ಳಿ: 9448825101, ಹೊಸಕೋಟೆ: 8217210320, ನೆಲಮಂಗಲ: 9880461607 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ(ಜಿಪಂ) ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

4 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

5 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

13 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

18 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago