ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ “ಅನ್ನ ಭಾಗ್ಯ” ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ರಾಜ್ಯ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಆಗಲಿದೆ.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ 15 ದಿನಗಳಲ್ಲಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ ಎಂದರು.
ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ ಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.
4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?
ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…