ತೋಟದ ಮನೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ತಡರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಾಪುರ ಗ್ರಾಮದ ರೈತ ವೆಂಕಟೇಶ್ ಅವರಿಗೆ ಸೇರಿದ ಮನೆ ಮುಂಭಾಗ ಕಟ್ಟಿಹಾಕಿದ್ದ ಹಸುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿರುವ ಚಿರತೆ. ಬೆಲೆ ಬಾಳುವ ಹಸು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಂದಿ ಬೆಟ್ಟ ಸಾಲಿನ ತಪಲಿನಲ್ಲಿರುವ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಕೂಡಲೇ ಚಿರತೆಯನ್ನ ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು ಅರಣ್ಯ ಇಲಾಖೆಗೆ ಊರಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.