ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು, ಕುರಿ & ಕೋಳಿ ಸಾಕಾಣಿಕೆ ಕುರಿತ 13 ದಿನಗಳ ಉಚಿತ ಸಮಗ್ರ ಕೃಷಿ ತರಬೇತಿಯು ಏಪ್ರಿಲ್ 06 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…
ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…
ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…