ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…