ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಏಪ್ರಿಲ್‌ 16 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್‌ 04 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9241482541, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

4 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

5 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

15 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

1 day ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

1 day ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

1 day ago