
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ…
ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ದರ್ಬಾರ್ ಪೇಟೆ ನಿವಾಸಿ ಮನು.ಎಲ್.ಎನ್. (29) ಮೃತಪಟ್ಟ ಯುವಕ.
ಮನು.ಎಲ್.ಎನ್. ವಿವಾಹವು 2026 ಮೇ 10ರಂದು ನಿಶ್ಛಯವಾಗಿತ್ತು. ಪ್ರೀವೆಡ್ಡಿಂಗ್ ಶೂಟ್ಗೆ ವಧುವನ್ನು ಕರೆ ತರಲು ಕಾರಿನಲ್ಲಿ ಹೋಗುತ್ತಿದ್ದಾಗ ಕಾರುನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮನು.ಎಲ್.ಎನ್. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದ ಮುಗಿಲು ಮುಟ್ಟಿತ್ತು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..