
ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಅವರು ಸಂತಾಪ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್ನ ಹಿರಿಯ ಮುಖಂಡರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಬಮೂಲ್ನ ಮಾಜಿ ಅಧ್ಯಕ್ಷರಾದ ಶ್ರೀ ಹಾಡೋನಹಳ್ಳಿ ಅಪ್ಪಯಣ್ಣನವರ ನಿಧನದ ಸುದ್ದಿ ನೋವುಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ದೇವರು ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ..
ಅದೇರೀತಿ ಮೃತರ ನಿಧನಕ್ಕೆ ತಾಲೂಕಿನ ಗಣ್ಯರು ಕಂಬನಿ ಮಿಡಿದಿದ್ದು, ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ.ಮುನೇಗೌಡ, ಜೆಡಿಎಸ್ ಮುಖಂಡರಾದ ಹರೀಶ್ ಗೌಡರು ಸೇರಿದಂತೆ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಹಾಡೋನಹಳ್ಳಿ ಅಪ್ಪಯಣ್ಣನವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಾಡೋನಹಳ್ಳಿಯ ಸ್ವಂತ ಜಮೀನಿನಲ್ಲಿ ನಡೆಯಲಿದೆ ಕುಟುಂಬಸ್ಥರು ತಿಳಿಸಿದ್ದಾರೆ