ಹಾಡೋನಹಳ್ಳಿ ಅಪ್ಪಯಣ್ಣನವರ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಸಂತಾಪ

ಹಾಡೋನಹಳ್ಳಿ ಅಪ್ಪಯ್ಯಣ್ಣನವರ‌‌ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಅವರು ಸಂತಾಪ ಸೂಚಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್‌ನ ಹಿರಿಯ ಮುಖಂಡರು, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರು ಹಾಗೂ ಬಮೂಲ್‌ನ ಮಾಜಿ ಅಧ್ಯಕ್ಷರಾದ ಶ್ರೀ ಹಾಡೋನಹಳ್ಳಿ ಅಪ್ಪಯಣ್ಣನವರ ನಿಧನದ ಸುದ್ದಿ ನೋವುಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ದೇವರು ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ..

ಅದೇರೀತಿ ಮೃತರ ನಿಧನಕ್ಕೆ ತಾಲೂಕಿನ ಗಣ್ಯರು ಕಂಬನಿ ಮಿಡಿದಿದ್ದು, ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ.ಮುನೇಗೌಡ, ಜೆಡಿಎಸ್ ಮುಖಂಡರಾದ ಹರೀಶ್ ಗೌಡರು ಸೇರಿದಂತೆ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಹಾಡೋನಹಳ್ಳಿ ಅಪ್ಪಯಣ್ಣನವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಾಡೋನಹಳ್ಳಿಯ ಸ್ವಂತ ಜಮೀನಿನಲ್ಲಿ ನಡೆಯಲಿದೆ ಕುಟುಂಬಸ್ಥರು ತಿಳಿಸಿದ್ದಾರೆ

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

3 minutes ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

5 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago