ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ: ಅಧ್ಯಕ್ಷರಾಗಿ ಹೆಚ್.ಎ ನಾಗರಾಜು, ಉಪಾಧ್ಯಕ್ಷೆಯಾಗಿ ರಮ್ಯಾ ಸಿ.ಹೆಚ್ ಆಯ್ಕೆ: ಗಣ್ಯರ ಅಭಿನಂದನೆ

 

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಹೆಚ್.ಎ ನಾಗರಾಜು ಮತ್ತು ರಮ್ಯಾ ಸಿ.ಹೆಚ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹಾಗೂ ಹನುಮಂತರಾಯಪ್ಪ ಮತ್ತು ಗಂಗರತ್ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದ್ದರು.

ಹದಿನೈದು ಸದಸ್ಯ ಬಲದ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನದ ಜೆಡಿಎಸ್ ಅಭ್ಯರ್ಥಿ ಹೆಚ್.ಎ ನಾಗರಾಜ್ ಅವರಿಗೆ 11 ಮಂದಿ ಸದಸ್ಯರು ಮತ ನೀಡಿ, 4 ಜನ ಕಾಂಗ್ರೆಸ್ ಅಭ್ಯರ್ಥಿ ಹನುಮಂತರಾಯಪ್ಪ ಪರವಾಗಿ ಮತ ಚಲಾವಣೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ರಮ್ಯಾ ಸಿ.ಹೆಚ್ ಅವರಿಗೆ 9 ಮಂದಿ ಬೆಂಬಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಗಂಗರತ್ನಮ್ಮ ಅವರಿಗೆ 6 ಮಂದಿ ಮತ ನೀಡಿದ್ದರು.

ಈ ಹಿನ್ನೆಲೆ ಚುನಾವಣೆಯಲ್ಲಿ ಹೆಚ್ಚು ಮತ ಪಡೆದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಎನ್.ಗಿರಿಜಾಂಬ ಪ್ರಕಟಿಸಿದ ನಂತರ ಜೆಡಿಎಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದರು.

ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರಾಜು ಮತ್ತು ಉಪಾಧ್ಯಕ್ಷರಾದ ರಮ್ಯಾ ಅವರಿಗೆ ಗಣ್ಯರಿಂದ ಅಭಿನಂದನೆಗಳು ಸಲ್ಲಿಸಿದರು.

ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನಾರಾಯಣಪ್ಪ, ಚುನಾವಣಾ ಅಧಿಕಾರಿ ಗಿರಿಜಾಂಬ ಎನ್, ದೇವನಹಳ್ಳಿ ತಾಲೂಕು ಜೆಡಿಎಸ್ ಉಪಾಧ್ಯಕ್ಷರಾದ ದೇವರಾಜ್, ಮಂಜುನಾಥ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ, ಜೆಡಿಎಸ್ ಮುಖಂಡರಾದ ಗೌರೀಶ್ ರಾಮಣ್ಣ, ಮುದ್ದುಕೃಷ್ಣಪ್ಪ, ಪುರುಷೋತ್ತಮ್, ಉದಯ ಆರಾಧ್ಯ ಮತ್ತಿತರರು ಭಾಗವಹಿಸಿದ್ದರು

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago