ಹಾಡೋನಹಳ್ಳಿ ಬಳಿ ಹಿಟ್ ಅಂಡ್ ರನ್: ಬೈಕ್ ಸವಾರಿನಿಗೆ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾಡೋನಹಳ್ಳಿ ಬಳಿ ಇಂದು ಸಂಜೆ ನಡೆದಿದೆ.

ತಾಲೂಕಿನ ಹಾಡೋನಹಳ್ಳಿ ನಿವಾಸಿ ದೇವರಾಜ್(44), ಮೃತ ದುರ್ದೈವಿ. ಬೈಕ್‌ ಗೆ ಡಿಕ್ಕಿ ಹೊಡೆದು ಸ್ಥಳದಿಂದ ಕಾರು ಸಮೇತ ಪರಾರಿಯಾಗಿರೋ ಕಾರು ಚಾಲಕ. ಕಾರಿನಲ್ಲಿ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಬಂದು ದೇವರ ದರ್ಶನ ಪಡೆದು ದೊಡ್ಡಬಳ್ಳಾಪುರ ಕಡೆ ಹೋಗುವ ವೇಳೆ ದೊಡ್ಡಬಳ್ಳಾಪುರದಿಂದ ಹಾಡೋನಹಳ್ಳಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ‌ ಹೊಡೆದಿರುವ ಕಾರು. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬರುವಷ್ಟರಲ್ಲಿ ಸ್ಥಳದಿಂದ ಕಾರು ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

3 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

7 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

8 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

9 hours ago