ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ

ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿ ಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ರಾಮನಾಯ್ಕ್, ಉಪಾಧ್ಯಕ್ಷರಾಗಿ ಗಂಗಲಕ್ಷ್ಮಮ್ಮ ಅವರು  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ  ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಮ ನಾಯ್ಕ್ ಮಾತನಾಡಿ, ಪಹಣಿ ಗಳ ಆಧಾರದ ಮೇಲೆ ಶೇ.3 ರಷ್ಟು ಬಡ್ಡಿದರದಲ್ಲಿ ರೈತರಿಗೆ ಕೃಷಿ ಸಾಲ ರಸಗೊಬ್ಬರ ಮತ್ತು ಇತರೆ ಅಗತ್ಯ ಸೇವೆಗಳಿಗೆ ಬದ್ದರಾಗಿರುತ್ತೇವೆ ಹಾಗು ಸಂಘಕ್ಕೆ ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಲಾಗುವುದು, ಪಡಿತರ ಕೇಂದ್ರ ಪ್ರಾರಂಭಿಸಲು ನಿರ್ಧಾರ ಮಾಡಿದ್ದೇವೆ. ರೈತರ ಅಭಿವೃದ್ದಿಗಾಗಿ ಸದಾ ಶ್ರಮಿಸುತ್ತೆವೆ ಎಂದರು.

ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಮನಾಯ್ಕ್ ಹಾಗೂ ಗಂಗಲಕ್ಷ್ಮಮ್ಮ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜ್, ತೂಬಗೆರೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ರಂಗಪ್ಪ, ಗಂಗಸಂದ್ರ ಶ್ರೀಧರ್, ಚಿದಾನಂದ, ಮೇಳೇಕೋಟೆ ಆಂಜಿನಪ್ಪ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಟಿಎಪಿಎಂಸಿ ನಿರ್ದೇಶಕ ಪುರುಷೋತ್ತಮ್, ಹಾಡೋನಹಳ್ಳಿ ರೈತ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ ಶ್ರೀಧರ್. ಎಂ ಮುನೇಗೌಡ‌, ನಂಜೇಗೌಡ, ಸದಸ್ಯರುಗಳಾದ ಮುದ್ದಣ್ಣ, ಪಿಳ್ಳಪ್ಪ, ವೆಂಕಟೇಶ, ಅನುಸೂಯಮ್ಮ, ಹನುಮಂತರಾಯಪ್ಪ, ಮುನಿರಾಜ್ ಹಾಗು ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

3 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

15 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

21 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

22 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago