ಹಾಡೋನಹಳ್ಳಿ ಸರ್ಕಲ್ ನ CL7 ಬಾರ್ ಅಂಡ್ ರೆಸ್ಟೋರೆಂಟ್ ಅನುಮತಿ ರದ್ದತಿಗೆ ದೂರು

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.

ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.

 ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 hour ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

4 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

19 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

22 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago