ಹಾದ್ರೀಪುರ ಕ್ರಿಕೆಟ್ ಟೂರ್ನಮೆಂಟ್-2 ಯಶಸ್ವಿ: ‘ಜೈ ಆಂಜನೇಯ ತಂಡ ವಿಜೇತ’: ಕ್ರೀಡೆಯಿಂದ ಯುವಕರಲ್ಲಿ ಹೆಚ್ಚಾದ ಬಾಂಧವ್ಯ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ.

ಈ ಕ್ರೀಡಾಕೂಟದಲ್ಲಿ ಜೈ ಆಂಜನೇಯ, ರಾಯಲ್ ಸ್ಟ್ರಾಂಗ್, ಎಬಿಡಿ ಸ್ಟ್ರೈಕರ್, ರಾಕ್ ಅಂಡ್ ರೋಲ್‌ ತಂಡಗಳು ಭಾಗವಹಿಸಿದ್ದವು. ಎರಡು ದಿನಗಳ‌ ಕಾಲ ನಡೆದ ಟೂರ್ನಮೆಂಟ್ ನಲ್ಲಿ ‘ಜೈ ಆಂಜನೇಯ’ ತಂಡ ವಿಜೇತರಾಗಿ ಹೊರ ಹೊಮ್ಮಿದರೆ, ರಾಯಲ್ ಸ್ಟ್ರಾಂಗ್ ತಂಡ ರನ್ನರ್ ಅಪ್ ಆಗಿದೆ.

ಕೆಲಸ ನಿಮಿತ್ತ ಊರಿಂದ ಹೊರಹೋಗಿದ್ದ ಯುವಕರು ಕೂಡ, ಎರಡು ದಿನ ಕೆಲಸ ಬದಿಗೊತ್ತಿ ಎಲ್ಲರೂ ಕೂಡ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾಲ್ಯ ಸ್ನೇಹಿತರೆಲ್ಲಾ ಜೊತೆಗೂಡಿ ಖುಷಿ ಖುಷಿಯಿಂದ ಕ್ರಿಕೆಟ್ ಆಟ ಆಡಿದರು. ಆಟ ಆಡುವ ವೇಳೆ ಬಾಲ್ಯದ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ದು ವಿಶೇಷವಾಗಿತ್ತು.

ವಿಜೇತ ಜೈ ಆಂಜಿನೇಯ ತಂಡಕ್ಕೆ‌ ಟ್ರೋಫಿ ಜೊತೆಗೆ ನಗದು ಬಹುಮಾನ, ರನ್ನರ್ ಅಪ್ ರಾಯಲ್ ಸ್ಟ್ರಾಂಗ್ ಮತ್ತು ಮೂರನೇ ಸ್ಥಾನ ಪಡೆದ ಎಬಿಡಿ ಸ್ಟ್ರೈಕರ್ ಗೆ ಟ್ರೋಫಿ ಜೊತೆಗೆ ನಗದು‌ ಬಹುಮಾನ ನೀಡಲಾಯಿತು.

ಈ ವೇಳೆ ಗ್ರಾಮದ ಹಿರಿಯ ಮುಖಂಡರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿ ಮಾಡಿದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

5 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

8 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

11 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

12 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

14 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

14 hours ago