ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.
ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.
ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…