ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಹಾಲು ಉತ್ಪಾದಕ ರೈತರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ವತಿಯಿಂದ ಗುರುವಾರ ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬಮೂಲ್ ನಿರ್ದೇಶಕ ಬಿ.ಸಿ. ಆನಂದ್, ರೈತರು ದೇಶದ ಬೆನ್ನೆಲುಬಾಗಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಸ್ವಂತ ಉದ್ಯೋಗ ಸೃಷ್ಟಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಹಿಂಡಿ, ಬೂಸ, ಮೇವು, ರಸಗೊಬ್ಬರ, ಪಶು ಆಹಾರ ಸೇರಿದಂತೆ ಕೃಷಿ ಮತ್ತು ಹೈನುಗಾರಿಕೆಗೆ ಅಗತ್ಯವಿರುವ ಎಲ್ಲಾ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಹಾಲಿನ ಖರೀದಿ ದರ ಮಾತ್ರ ಹಲವು ವರ್ಷಗಳಿಂದ ಹೆಚ್ಚಳವಾಗಿಲ್ಲ. ಇದರಿಂದ ಹೈನುಗಾರಿಕೆ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ಹಾಲು ಉತ್ಪಾದಕ ರೈತರು ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಹಸು ಸಾಕುವುದಕ್ಕಿಂತ ಹಸುವನ್ನು ಸಾಕಲು ರೈತನೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ಪಾದನಾ ವೆಚ್ಚ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರಿಕೆ ನಷ್ಟದ ಉದ್ಯಮವಾಗಿ ಪರಿಣಮಿಸಿದೆ. ಆದ್ದರಿಂದ ಸರ್ಕಾರ ಕೂಡಲೇ ಪ್ರತಿ ಲೀಟರ್‌ಗೆ ರೂ.10 ಖರೀದಿ ದರ ಹೆಚ್ಚಳದ ಜೊತೆಗೆ ಪ್ರೋತ್ಸಾಹಧನವನ್ನೂ ಹೆಚ್ಚಿಸಿ ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ವಿಶೇಷವಾಗಿ ರೈತರು ಮೂರು ಹಸುಗಳನ್ನು ಜಿಲ್ಲಾಡಳಿತ ಭವನದ ಆವರಣಕ್ಕೆ ಕರೆತಂದು ವಿನೂತನವಾಗಿ ತಮ್ಮ ಅಹವಾಲು ವ್ಯಕ್ತಪಡಿಸಿದರು.

ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರೈತರ ಪ್ರಮುಖ ಬೇಡಿಕೆಗಳು:

*ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ.೧೦ ಹೆಚ್ಚಿಸಬೇಕು.

*ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು.

*ಪಶು ಆಹಾರ, ಹಿಂಡಿ, ಬೂಸ ಮತ್ತು ಮೇವು ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

*ಬರ ಪರಿಸ್ಥಿತಿಯನ್ನು ಎದುರಿಸಲು ಹೈನುಗಾರರಿಗೆ ವಿಶೇಷ ನೆರವು ಘೋಷಿಸಬೇಕು.

*ಹೈನುಗಾರಿಕೆಯನ್ನು ಉಳಿಸಲು ಶಾಶ್ವತ ನೀತಿ ರೂಪಿಸಬೇಕು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಮುಖಂಡರಾದ ಹರೀಶ್‌ಗೌಡ, ರಂಗರಾಜು, ವಿವಿಧ ಸಂಘಟನೆಗಳ ಮುಖಂಡರು, ಹಾಲು ಉತ್ಪಾದಕ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

12 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

13 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

15 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

16 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

17 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

23 hours ago