ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ವ್ಯಾಪ್ತಿಯ ರೈತರು ಸೆ.22ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ತಿಳಿಸಿದ್ದಾರೆ.
ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಮಾತನಾಡಿದ ಅವರು, ಹಿಂಡಿ, ಬೂಸ, ಮೇವು, ಸಾಗಾಣಿಕೆ ಸೇರಿದಂತೆ ನಿರ್ವಹಣಾ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರಿಕೆ ನಡೆಸುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಮಳೆ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಕೊರತೆಯೂ ಎದುರಾಗಿದೆ ಎಂದರು.
ರೈತರ ಸಂಕಷ್ಟವನ್ನು ಪರಿಗಣಿಸಿ ಸರ್ಕಾರ ಕೂಡಲೇ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ಕನಿಷ್ಠ 10 ಹೆಚ್ಚಿಸುವ ಮೂಲಕ ರೈತಪರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸೆ.22ರಂದು ಆಯಾ ಗ್ರಾಮಗಳ ಎಂಪಿಸಿಎಸ್ ಸಂಘಗಳ ಮೂಲಕ ರೈತರು ನಗರದ ಬಮೂಲ್ ಶಿಬಿರ ಕಚೇರಿಗೆ ಆಗಮಿಸಿ, ಅಲ್ಲಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಪ್ರತಿಭಟನೆಗೆ ತೆರಳಬೇಕು. ತಾಲ್ಲೂಕಿನ ಎಲ್ಲಾ ರೈತರು ಪಕ್ಷಾತೀತವಾಗಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಬೆಂಗಳೂರು ಹಾಲು ಒಕ್ಕೂಟದ ವ್ಯಾಪ್ತಿಯ ಸಾವಿರಾರು ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಬಿ.ಸಿ. ಆನಂದ್ ಕುಮಾರ್ ತಿಳಿಸಿದರು.
ಬೆಂಗಳೂರು: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಮುಕ್ತಾಯಗೊಂಡಿದ್ದು,…
ದೊಡ್ಡಬಳ್ಳಾಪುರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.…
ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್ ಎದುರಿನ ನಿರ್ಜನ ಪ್ರದೇಶದಲ್ಲಿನ ರಾಜಕಾಲುವೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು…
ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಂಗಳವಾರ ಬೆಳಗ್ಗೆ…