Categories: ಕೋಲಾರ

ಹಾಲು ಖರೀದಿ ದರ ಇಳಿಕೆ ಆದೇಶ ವಾಪಸ್ ಮಾಡುವಂತೆ ಜೆಡಿಎಸ್‌ ಬಿಜೆಪಿ ಮೈತ್ರಿ ಪಕ್ಷಗಳಿಂದ ಗಡುವು

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಯು ಹಾಲು ಉತ್ಪಾದಕರ ಖರೀದಿ ದರವನ್ನು 2 ರೂಪಾಯಿ ಇಳಿಕೆ ಮಾಡಿರುವ ಆದೇಶವನ್ನು ಒಂದು ವಾರದ ಒಳಗೆ ವಾಪಸ್ ಪಡೆಯುವಂತೆ ಕೋಚಿಮುಲ್ ಆಡಳಿತ ಮಂಡಳಿಗೆ ಜೆಡಿಎಸ್‌-ಬಿಜೆಪಿ ಮೈತ್ರಿಕೂಟದಿಂದ ಗಡುವು ನೀಡಿದರು.

ನಗರದಲ್ಲಿ ಗುರುವಾರ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಕಚೇರಿಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಕೂಟದಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ಮುಖಂಡರು ಎರಡು ಪಕ್ಷದ ಮುಖಂಡರಿಂದ ಶುಕ್ರವಾರ ಸಾಂಕೇತಿಕವಾಗಿ ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ, ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ನೀಡಿ ಒಂದು ವಾರದೊಳಗೆ ಆದೇಶವನ್ನು ವಾಪಸ್ ಪಡೆದು ಜಿಲ್ಲೆಯ ರೈತರನ್ನು ರಕ್ಷಣೆಗೆ ಮುಂದಾಗಬೇಕು. ಒತ್ತಾಯಿಸುವುದು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಮುಂದಾಗುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಜಿಲ್ಲೆಯ ರೈತರ ಜೀವನಾಧಾರವಾಗಿ ಹೈನುಗಾರಿಕೆಯನ್ನು ನಂಬಿ ಬದುಕನ್ನು ಕಂಡುಕೊಂಡಿದ್ದಾರೆ. ಆದರೆ, ಇವತ್ತು ಕೋಚಿಮುಲ್ ಆಡಳಿತ ಮಂಡಳಿಯ ತಪ್ಪು ನಿರ್ಧಾರಗಳಿಂದ ಜಿಲ್ಲೆಯ ಜನ ಹೈನುಗಾರಿಕೆಯಿಂದ ದೂರ ಉಳಿಯುವಂತ ವಾತಾವರಣವನ್ನು ಸೃಷ್ಟಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಪಕ್ಷಗಳು ಜನರ ಪರವಾಗಿ ನಿರಂತರವಾಗಿ ಹೋರಾಟಗಳ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಂಡು ಬಂದಿದ್ದಾರೆ ಮುಂದೆಯೂ ಹೋರಾಟದಿಂದಲ್ಲೇ ಕೋಚಿಮುಲ್ ಆಡಳಿತ ಮಂಡಳಿಗೆ ಎಚ್ಚರಿಕೆಯನ್ನು ನೀಡಬೇಕಾಗಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಗ್ಗಟ್ಟಿನಿಂದ ಹೋಗಲಿದ್ದೇವೆ. ರಾಜ್ಯದಲ್ಲಿ ಮೈತ್ರಿಕೂಟದ ಪಕ್ಷಗಳಿಂದ ವಿರೋಧ ಪಕ್ಷವಾಗಿ ಸಮರ್ಥವಾಗಿ ಎದುರಿಸಲಿದ್ದೇವೆ. ಆಡಳಿತ ಪಕ್ಷ ಕಾಂಗ್ರೆಸ್ ಸರಕಾರದ ರೈತರು ಕಾರ್ಮಿಕರ, ಬಡವರ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಜನಕ್ಕೆ ಜಾಗೃತಿ ಮೂಡಿಸಲಾಗುತ್ತದೆ. ಕಾಂಗ್ರೆಸ್ ಪಕ್ಷದ ಸಹವಾಸ ಜನಕ್ಕೆ ಸಾಕಾಗಿದೆ ಮುಂದಿನ ದಿನಗಳಲ್ಲಿ ಜನರೇ ಉತ್ತರ ಕೊಡುವ ಕಾಲ ಹತ್ತಿರಕ್ಕೆ ಬಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟವು ದಿಢೀರ್‌ನೆ ಪ್ರತಿ ಲೀಟರ್‌ ಹಾಲಿನ ಮೇಲೆ 2 ರೂ.ದರ ಕಡಮೆ ಮಾಡಿದ್ದಾರೆ ಈಗಾಗಲೇ ಮಳೆಯ ಕೊರತೆಯ ನಡುವೆ ಕೋಚಿಮುಲ್‌ ಆಡಳಿತ ಮಂಡಳಿ ರೈತರ ನೆರವಿಗೆ ಧಾವಿಸದೇ ಗಾಯದ ಮೇಲೆ ಬರೆ ಎಳೆದಂತೆ ಮಾಡಿದ್ದಾರೆ. ಪ್ರತಿ ಲೀಟರ್‌ ಹಾಲು ಉತ್ಪಾದನೆಗೆ ಕನಿಷ್ಠ 40 ರೂ ಖರ್ಚು ಆಗುತ್ತದೆ ಆದರೆ ಇದೀಗ 2 ರೂ. ದರ ಕಡಿತಗೊಳಿಸಿದ್ದು, ರೈತರಿಗೆ ಪ್ರತಿ ಲೀಟರ್‌ಗೆ 31 ರೂ ಸಿಗಲಿದೆ. ಬರಗಾಲದ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಕಷ್ಟದಲ್ಲಿರುವಾಗ ಬೆಲೆ ಕಡಿತ ಎಷ್ಟು ಸರಿ ಎಂದು ಒಕ್ಕೂಟವನ್ನು ಪ್ರಶ್ನಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಬಾಬು ಮೌನಿ ಮಾತನಾಡಿ, ಜಿಲ್ಲೆಯ ಹಾಲು ಉತ್ಪಾದಕರ ನೆರವಿಗೆ ಈ ಕೂಡಲೇ ಸರ್ಕಾರ ಮತ್ತು ಒಕ್ಕೂಟವು ಧಾವಿಸಬೇಕು ಕೋವಿಡ್‌ ಸಂದರ್ಭದಲ್ಲಿ ಹೈನುಗಾರಿಕೆ ಹಾಗೂ ರೈತರಿಗೂ ತೊಂದರೆ ಆಗಿತ್ತು ಕ್ರಮೇಣವಾಗಿ ಚೇತರಿಸಿಕೊಳ್ಳುವ ಹಂತದಲ್ಲಿ ಹಾಲು ಖರೀದಿ ದರ ಕಡಿಮೆ ಮಾಡಿದ್ದು ರೈತರಿಗೆ ಹಾಗೂ ಹಾಲು ಉತ್ಪಾದಕರಿಗೆ ಮಾಡಿದ ಮೋಸವಾಗಿದೆ ಕೂಡಲೇ ಆದೇಶವನ್ನು ವಾಪಸು ಪಡೆಯಬೇಕು ಇಲ್ಲದೇ ಹೋದರೆ ಜೆಡಿಎಸ್‌ ಮತ್ತು ಬಿಜೆಪಿ ನೇತೃತ್ವದಲ್ಲಿ ರಾಜ್ಯಾದ್ಯಂತ ಜಂಟಿಯಾಗಿ ಹೋರಾಟವನ್ನು ನಡೆಸಲಾಗುತ್ತದೆ ಎಂದರು.

ಸಭೆಯಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಯಲವಾರ ಸೊಣ್ಣೇಗೌಡ, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ಅರುಣಮ್ಮ, ಜೆಡಿಎಸ್‌ ತಾಲೂಕು ಕಾರ್ಯಾಧ್ಯಕ್ಷ ಜನಪನಹಳ್ಳಿ ಆನಂದ್, ಪ್ರಧಾನ ಕಾರ್ಯದರ್ಶಿ ದಿಂಬ ನಾಗರಾಜಗೌಡ, ಮೈತ್ರಿ ಪಕ್ಷದ ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ತೋಟಗಳ ಅಶೋಕ್, ರೋಟರಿ ಸುಧಾಕರ್, ಮಂಜುನಾಥ್, ಎಬಿವಿಪಿ ಹರೀಶ್ ಮುಂತಾದವರು ಇದ್ದರು,

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

9 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

23 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

13 hours ago