ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು ಸಂತಸಗೊಂಡಿದ್ದಾರೆ ಅದೇ ರೀತಿ ಪಶು ಆಹಾರ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರ ಹಿತ ಕಾಯುವಂತಾಗಬೇಕು ಎಂದು ಸೀಸಂದ್ರ ಹಾಲು ಡೇರಿ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈಗಾಗಲೇ ಕೋಲಾರ ಹಾಲು ಒಕ್ಕೂಟವು ರೈತರಿಂದ ಲೀಟರ್ ಹಾಲಿಗೆ 30.15 ಕೊಡಲಾಗುತ್ತಿದೆ ಸರ್ಕಾರವು 2 ರೂ ಹೆಚ್ಚಿಸಿದ್ದರಿಂದ 32.15 ಕೊಡಲಾಗುತ್ತದೆ ಇದು ಒಂದು ಕಡೆ ಸಂತಸ ಆದರೆ ಬೇಸಿಗೆಯಲ್ಲಿ ಹೈನುಗಾರಿಕೆ ತುಂಬಾ ಕಷ್ಟವಾಗುತ್ತದೆ ಹಾಲು ಉತ್ಪಾದನೆ ಕಡಮೆ ಜೊತೆಗೆ ನಿರ್ವಹಣಾ ವೆಚ್ಚ ಅಧಿಕವಾಗಿರುತ್ತದೆ ಕೂಡಲೇ ಪಶು ಆಹಾರ ದರವನ್ನು ಕಡಮೆ ಮಾಡಿದರೆ ಉತ್ಪಾದಕರಿಗೆ ಅನುಕೂಲವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಕಾಲವು ಪ್ರಾರಂಭವಾಗಿದೆ ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಖರೀದಿ ದರ 2 ರೂಪಾಯಿ ಹೆಚ್ಚಿಸಿದ್ದಾರೆ ಹಾಲು ಉತ್ಪಾದಕರಿಗೆ ನೆರವಾಗುವ ಉದ್ದೇಶವೇ ಒಕ್ಕೂಟಕ್ಕೆ ಮುಖ್ಯವಾಗಬೇಕು ಅದೇ ರೀತಿ ಸುಮಾರು ಆರೇಳು ತಿಂಗಳಗಳ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಧಾವಿಸುವಂತೆ ಸೀಸಂದ್ರ ಗೋಪಾಲಗೌಡ ಒತ್ತಾಯ ಮಾಡಿದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…