Categories: ಕೋಲಾರ

ಹಾಲು ಖರೀದಿ ಧರ ಇಳಿಕೆ ಆದೇಶ ವಾಪಸು ಪಡೆಯುವಂತೆ ಕೆ.ಪಿ.ಆರ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಹಾಲು ಉತ್ಪಾದಕರ ಖರೀದಿ ಧರ 2 ರೂ ಇಳಿಕೆ, ಸರ್ಕಾರ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ದನ ಬಿಡುಗಡೆ ಸೇರಿದಂತೆ ಹೈನುಗಾರಿಕೆ ಉಳಿವಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಹಾಲು‌ ಉತ್ಪಾದಕರ ನೇತೃತ್ವದಲ್ಲಿ ಸೋಮವಾರ ಕೋಚಿಮುಲ್ ಒಕ್ಕೂಟ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವಾಗಿದ್ದು, ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಹೈನುಗಾರಿಕೆಯು ಆನೇಕ ಬಿಕ್ಕಟ್ಟುಗಳನ್ನು ಎದುರುಸುತ್ತಿದೆ. ರಾಜ್ಯದಲ್ಲಿ ಸುಮಾರು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ 22.5ಲಕ್ಷ ಸದಸ್ಯರಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನೆ ವೆಚ್ಚವು ಸರಿ ಸುಮಾರು 45 ರೂ ಆಗಿದ್ದು ಜಿಲ್ಲಾ ಒಕ್ಕೂಟ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧರ ಸೇರಿ 36 ರೂ ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು ಇದು ಯಾವುದಕ್ಕೂ ಸಾಲದಾಗಿದೆ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ ನಷ್ಟವಾಗುತ್ತಿರುವ ಈ ಸಂದರ್ಭದಲ್ಲೇ ರಾಜ್ಯ ಸರ್ಕಾರ ಪ್ರೋತ್ಸಾಹ ಧನವನ್ನು 8 ತಿಂಗಳಿಂದ ಬಂದಿಲ್ಲ ತೀವ್ರ ಬರಗಾಲದಿಂದ ತತ್ತರಿಸಿರುವ ಹಾಲು ಉತ್ಪಾದಕರಿಗೆ ಗಾಯದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ. ಇದರಿಂದ ಈಗಾಗಲೆ ಸರ್ಕಾರಗಳ ರೈತವಿರೋಧಿ ಧೋರಣೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಾಲು ಉತ್ಪಾದಕರು ಹೈನುಗಾರಿಕೆಯಿಂದಲು ದೂರ ಉಳಿಯಲು ಹೆಚ್ಚಾಗುತ್ತಿರುವುದರಿಂದ ಕೋಚಿಮುಲ್ ಇಳಿಕೆ ಮಾಡಿರುವ ಹಾಲಿನ ಧರದ ಆದೇಶವನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನುಕ್ಕನಹಳ್ಳಿ ಶ್ರೀರಾಮ್ ಮಾತನಾಡಿ
ಸಹಕಾರಿ ತತ್ವದಲ್ಲಿ ಬಲಗೊಂಡಿರುವ ನಂದಿನಿ ಸಂಸ್ಥೆಯ ಮಾರುಕಟ್ಟೆಗಳನ್ನು ವಿಸ್ತರಿಸಿ, ಹಾಲು ಉತ್ಪಾದಕರನ್ನು ಸಂರಕ್ಷಿಸಿ, ಹೈನುಗಾರಿಕೆಯನ್ನು ಉಳಿಸಬೇಕಾಗಿದ್ದ ಸರ್ಕಾರವೇ ಈ ಕ್ಷೇತ್ರದಲ್ಲಿ ಬಹುರಾಷ್ಟ್ರೀಯ ಕಂಪನಿಯಗಳಿಗೆ ಮತ್ತು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಕೂಡಲೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹದನ ಬಿಡುಗಡೆ ಮಾಡಬೇಕು ಸಹಕಾರ ಸಂಘಗಳು ಸರಬರಾಜು ಮಾಡಿರುವ ಹಾಲಿಗೆ ಒಕ್ಕೂಟದಿಂದ ನೀಡುವ ಹಣ ಸರಿಯಾದ ಸಮಯಕ್ಕೆ ನೀಡಬೇಕು ಪ್ರೋತ್ಸಾಹ ಧನ 5 ರೂಗಳ ಬದಲಿಗೆ 10 ರೂಗಳಿಗೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಹಸುಗಳ ಬೆಲೆ ಏರಿಕೆ ಸೇರಿದಂತೆ ಉತ್ಪಾದನ ವೆಚ್ಚ ವಿಪರೀತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಡಾ ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸು ಪ್ರಕಾರ ಲೀಟರ್ ಹಾಲಿಗೆ 50 ರೂಪಾಯಿ ಬೆಲೆ ನಿಗಧಿ ಮಾಡಬೇಕು ಪ್ರತಿ ಜಿಲ್ಲೆಗೊಂದು ಕೆ.ಎಂ.ಎಫ್ ನಿಂದ ಹಾಲು ಉತ್ಪಾದಕರ ಮಕ್ಕಳಿಗೆ ವಿದ್ಯಾರ್ಥಿಗಳ ವಸತಿ ನಿಲಯ ಪ್ರಾರಂಭಿಸಬೇಕು ಪಶು ಆಹಾರಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆ ನಿಯಂತ್ರಣ ಮಾಡಲು ಕೆ.ಎಂ.ಎಫ್. ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದರು.

ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಕೇಂದ್ರಗಳನ್ನು ವ್ಯಾಪಕವಾಗಿ ಹೆಚ್ಚಿಸಬೇಕು ಹಾಲಿನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ. ತೆರಿಗೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕು ಹೈನುಗಾರಿಕೆಗೆ ಸರ್ಕಾರ ಸಬ್ಸಿಡಿ ಸಹಿತ ಸಾಲವಿತರಣೆ ನೀಡಬೇಕು ಕೋಚಿಮುಲ್ ಒಕ್ಕೂಟದಲ್ಲಿ ನೇಮಕಾತಿ, ಟೆಂಡರ್‌ಗಳ ಹೆಸರಿನಲ್ಲಿ ಹಾಗೂ ಇತರೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆ ನೇತೃತ್ವವನ್ನು ಸಂಘಟನೆ ಮುಖಂಡರಾದ ಅಲಹಳ್ಳಿ ವೆಂಕಟೇಶಪ್ಪ, ರಾಮರೆಡ್ಡಿ, ನಾರಾಯಣಸ್ವಾಮಿ, ಶ್ರೀನಿವಾಸ್, ರಾಜೇಶ್, ಚಿನ್ನಮ್ಮ, ರಾಜೇಂದ್ರ, ಮುನಿರತ್ನಮ್ಮ,ವಿವಿಧ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರಾದ ವಾನರಾಶಪ್ಪ, ಸರೋಜಮ್ಮ, ಮಂಜುನಾಥ್, ಚಂದ್ರಪ್ಪ, ಭೈರಪ್ಪ, ಮಂಜುನಾಥ್, ಸೂರ್ಯನಾರಾಯಣಪ್ಪ ಹಸಾಳ ಮಂಜುನಾಥ್, ನೌಕರರ ಸಂಘದ ಅಧ್ಯಕ್ಷ ಡಿ. ಶಿವರುದ್ರಯ್ಯ, ಕಾರ್ಯದರ್ಶಿ ಮಂಜುನಾಥ್, ಸದಸ್ಯರಾದ ಕೆಂಪಣ್ಣ, ಸುಬ್ಬಣ್ಣ, ಮುಂತಾದವರಿದ್ದರು.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

5 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

6 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

6 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

8 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

19 hours ago