
ಹಾಲೋ ಬ್ರಿಕ್ಸ್ ನಿಂದ ತಲೆಗೆ ಹೊಡೆದು ನಡು ರಸ್ತೆಯಲ್ಲಿಯೇ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಬುಲೆಟ್ ರಘು (38) ಎಂದು ಗುರುತಿಸಲಾಗಿದೆ.
ಸದ್ಯ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ವ್ಯಕ್ತಿ ಮೇಲೆ ಅಟ್ಯಾಕ್ ಮಾಡಿ ಹತ್ಯೆ ಮಾಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ….
ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್ಪಿ ರವಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.