ಹಾಸನದಲ್ಲಿ ಲಾರಿ ಹರಿದು 8 ಮಂದಿ ದುರ್ಮರಣ: ಹಲವರಿಗೆ ಗಾಯ: ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ತಿಳಿಸಿದ್ದಾರೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇನ್ನು ಟ್ರಕ್ ಚಾಲಕ ಭುವನೇಶ್ ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಸ್ಥಳೀಯರು ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದು ಭುವನೇಶ್ ಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!