ಹಾಸನ ಪೆನ್ ಡ್ರೈವ್ ಪ್ರಕರಣ ಹೊರ ಬಂದ ಬೆನ್ನೆಲ್ಲೆ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.
ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಮೇ.27ರಂದು ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು.
ಅದರಂತೆ ಇದೀಗ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್‌ನಿಂದ ಹೊರಟ ಲುಫ್ತಾನ್ಸ ಎಲ್ಎಚ್ 764 ವಿಮಾನ ತಡರಾತ್ರಿ 12:50 ಕ್ಕೆ ಬೆಂಗಳೂರಿನ ಕೆಐಎಎಲ್‌ಗೆ ಬಂದಿತು.
ಪ್ರಜ್ವಲ್‌ರ ಬಂಧನಕ್ಕಾಗಿ ವಿಮಾನ ನಿಲ್ದಾಣ ಬಳಿ ಎಸ್‌ಐಟಿ ಅಧಿಕಾರಿಗಳು ಠಿಕಾಣಿ ಹೂಡಿದ್ದರು, ಪ್ರಜ್ವಲ್ ವಿಮಾನದಿಂದ ಕೆಳಗಿಳಿದು ಬರುತ್ತಿದ್ದಂತೆ ಇಮಿಗ್ರೇಷನ್ ಅಧಿಕಾರಿಗಳು ಅವರ ಪಾಸ್‌ಪೋರ್ಟ್ ಸೇರಿದಂತೆ ಕೆಲ ದಾಖಲಾತಿಗಳನ್ನು ಪರಿಶೀಲಿಸಿ ವಶಕ್ಕೆ ತೆಗೆದುಕೊಂಡರು. ಬಳಿಕ ರಾತ್ರಿ 1.20 ಕ್ಕೆ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿದರು.