ಹಾಸನ ಪೆನ್ ಡ್ರೈವ್ ಪ್ರಕರಣ: ನಾಳೆ (ಮೇ.13) ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಹಾಸನ ಚಲೋ

ಮೇ 13 ರ ಸೋಮವಾರ ಪೆನ್ ಡ್ರೈವ್ ಪ್ರಕರಣ ಕುರಿತಂತೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಹೇಳಿದರು.

ನಗರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣ ಬಾರಿ ಚರ್ಚೆಗೆ ಗುರಿಯಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಕೆಸರು ಎರಚಿಕೊಳ್ಳುತ್ತಿದ್ದಾರೆ. ಪ್ರಕರಣ ಸಾವಿರಾರು ಹೆಣ್ಣು ಮಕ್ಕಳ ಜೀವ, ಜೀವನ ಹಾಗೂ ಘನತೆಯ ವಿಷಯವಾಗಿದೆ. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೇಮಿಸಿರುವ ಎಸ್ ಐ ಟಿ ತನಿಖಾತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದ್ದು. ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ತಪ್ಪು ಮಾಡಿ ತಲೆ ಮರೆಸಿಕೊಂಡಿರುವ ರಾಜಕಾರಣಿಯನ್ನು ಕೂಡಲೇ ಕಾನೂನು ಕ್ರಮಕ್ಕೆ ಒಳಪಡಿಸಬೇಕಿದೆ. ಈ ಮೂಲಕ ದೇಶದ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಉತ್ತಮ ಭಾವನೆ ಹಾಗೂ ಅಚಲ ನಂಬಿಕೆ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.

ನಮ್ಮ ರಾಜ್ಯದಲ್ಲಿ ಸಾಕಷ್ಟು ತನಿಖೆಗಳು ನಡೆದಿವೆ. ಇಲ್ಲಿಯವರೆಗೂ ಯಾರಿಗೂ ಶಿಕ್ಷೆ ಆಗಿದ್ದನ್ನು ನಾವು ಕಂಡಿಲ್ಲ, ಅದೇ ಜನಸಾಮಾನ್ಯ ಒಬ್ಬ ತಪ್ಪು ಮಾಡಿದ್ದರೆ ಪೊಲೀಸರು ಹೇಗೆ ವರ್ತಿಸುತ್ತಾರೆ ಎಂಬುದು ನಾವು ಕಂಡಿದ್ದೇವೆ. ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂಬ ಭಾವನೆ ಇರಬಾರದು. ನಮಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು ಇಂತಹ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದು ನಮ್ಮ ಜವಾಬ್ದಾರಿ ಎಂದು ಕಿವಿ ಮಾತು ಹೇಳಿದರು.

ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಎಸ್ಐಟಿ ತನಿಖಾತಂಡದಿಂದ ಬಿಡುಗಡೆಗೊಳಿಸಿ ಕೇಂದ್ರದ ಸಿಬಿಐಗೆ ಒಪ್ಪಿಸಿದರೆ ಉತ್ತಮ ಎಂದ ಅವರು, ತನಿಖಾ ಸಂಸ್ಥೆಗಳು ನಿಷ್ಠೆಯಿಂದ ಶ್ರಮಿಸುತ್ತವೆ ಆದರೆ ಅಧಿಕಾರದಲ್ಲಿರುವ ಪಕ್ಷಗಳು ಹಾಗೂ ರಾಜಕಾರಣಿಗಳು ತನಿಖಾ ಸಂಸ್ಥೆಗಳು ನೀಡಿರುವ ಮಾಹಿತಿ ಮರೆಮಾಚುತ್ತವೆ ಎಂದು ಆರೋಪಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಲ್.ಎನ್‌.ಆನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಮಾರುತಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ವಿಜಯಕುಮಾರ್ ತಾ. ಚಾಲಕರ ಘಟಕದ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

2 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

12 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

16 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

18 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

21 hours ago