ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ನಡೆದಿದೆ.
ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಮೃತ ವಿದ್ಯಾರ್ಥಿ. ಹಾಸ್ಟೆಲ್‌ನ ಕೊಠಡಿಯಲ್ಲಿದ್ದ ಪ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಜೋಹೆಲ್ ಪತ್ತೆಯಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ಯಾನ್‌ನಿಂದ ಮೃತದೇಹವನ್ನು ಕೆಳಗಿಳಿಸಿ, ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…