ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪೊನ್ನಂಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿತು. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಳು.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…