Categories: ಕೋಲಾರ

ಹಾಸ್ಟೆಲ್ ವ್ಯವಸ್ಥೆ ಸರಿಪಡಿಸಿ ಗುಣಮಟ್ಟದ ಆಹಾರ ನೀಡದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ರೈತ ಸಂಘ ಅಗ್ರಹ

ಕೋಲಾರ: ಜಿಲ್ಲೆಯಾದ್ಯಂತ ಹದಗೆಟ್ಟಿರುವ ಹಾಸ್ಟೆಲ್ ವ್ಯವಸ್ಥೆಯನ್ನು ಸರಿಪಡಿಸಿ ಮಕ್ಕಳ ಊಟದ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಅಧಿಕಾರಿಗಳು ಹಾಗೂ ಕಳಪೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ನಗರದ ಹೊರವಲಯದ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಮಾಡುವ ಹಾಸ್ಟೆಲ್‌ಗಳಲ್ಲಿ ಒಂದಲ್ಲ ಒಂದು ರೀತಿ ಅವ್ಯವಸ್ಥೆ ನಡೆಯುತ್ತಿದೆ. ಇತ್ತೀಚೆಗೆ ಮಲದಗುಂಡಿಯಲ್ಲಿ ಮಕ್ಕಳಿಂದ ಸ್ವಚ್ಚತೆ ಹಾಗೂ ಹೆಣ್ಣು ಮಕ್ಕಳ ಆಶ್ಲೀಲ ಚಿತ್ರೀಕರಣ ಜೀವಂತವಾಗಿರುವಾಗ ಮತ್ತೆ ಹಾಸ್ಟೆಲ್‌ಗಳಲ್ಲಿನ ಸಿಬ್ಬಂದಿಯ ಬೇಜವಬ್ದಾರಿ ಮನಸ್ಥಾಪಗಳು ಒಳ ಜಗಳಗಳಿಂದ ಬಡ ಮಕ್ಕಳ ಊಟಕ್ಕೆ ವಿಷ ಹಾಕುವ ಪ್ರಕರಣ ಮಾನವೀಯತೆಯುಳ್ಳ ಸಮಾಜ ತಲೆ ತಗ್ಗಿಸುವಂತ ವಿಚಾರವಾಗಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಕಡೆ ಮಕ್ಕಳ ಹಾಜರಾತಿಯಲ್ಲಿ ಹಾಗೂ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರ ಕಡಿಮೆ ಬೆಲೆಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿ ದುಬಾರಿ ಬೆಲೆಯ ಬಿಲ್‌ಗಳನ್ನು ನೀಡಿ ಅಧಿಕಾರಿಗಳ ಜೊತೆ ಶಾಮೀಲಾಗಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುವ ದಂದೆ ಒಂದು ಕಡೆಯಾದರೆ ಹಾಸ್ಟೆಲ್‌ನಲ್ಲಿ ಇರುವ ಮಕ್ಕಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಹಗರಣಗಳಾಗಿ ಮಾರ್ಪಟ್ಟಿದ್ದರೂ ಕನಿಷ್ಠ ಸೌಜನ್ಯಕ್ಕಾದರೂ ಹಾಸ್ಟೆಲ್ ಭೇಟಿ ನೀಡದೆ ಸಭೆಗಳಲ್ಲಿ ಅಬ್ಬರಿಸಿ ಬಿಬ್ಬರಿಸುವ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ಜಲ್ವಂತ ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ನಾಪತ್ತೆ ಆಗಿರುವ ಜೊತೆಗೆ ಅಧಿಕಾರಿಗಳಿಗೆ ಭಯವಿಲ್ಲದೆ ಎಲ್ಲಾ ಕಚೇರಿಗಳು ದಲ್ಲಾಳಿಗಳ ಕಚೇರಿಗಳಾಗಿ ಮಾರ್ಪಟ್ಟಿವೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸಲಾಗದೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ವಿವಿಧ ವಸತಿ ಶಾಲೆಗಳಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬರುವ ಮಕ್ಕಳ ಜೀವನದ ಜೊತೆ ಹಾಸ್ಟೆಲ್ ಸಿಬ್ಬಂದಿ ಮೂಲ ಭೂತ ಸೌಕರ್ಯಗಳು ಗುಣಮಟ್ಟದ ಊಟವಿಲ್ಲದೆ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ಬಲಿ ಆಗಬೇಕಾದ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಹಾಸ್ಟೆಲ್ ವ್ಯವಸ್ಥೆಗಳನ್ನು ಸರಿಪಡಿಸಲು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಊಟದ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಿಬ್ಬಂದಿ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸರಬರಾಜು ಮಾಡಿ ದುಬಾರಿ ಲೆಕ್ಕ ತೊರಿಸುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಬಡಮಕ್ಕಳ ಶಿಕ್ಷಣ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಮಂಗಸಂದ್ರ ತಿಮ್ಮಣ್ಣ, ಯಲ್ಲಪ್ಪ, ಹರೀಶ್, ವಿಜಯ್‌ಪಾಲ್, ಪಾರುಕ್‌ಪಾಷ, ಗೀರೀಶ್, ಮುಂತಾದವರಿದ್ದರು.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

18 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago