ಹಾಸ್ಯ ನಟ ಉಮೇಶ್ ಮತ್ತು ಜಾನಪದ ಕಲಾವಿದ   ಶ್ಯಾಕಲದೇವನಪುರ ರಾಮಚಂದ್ರಯ್ಯ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಕಲಾವಿದರ ಸಾವು ನೋವಿನ ಸಂಗತಿಯೇ, ಕಲಾವಿದರು ತಮ್ಮ ಕಲೆ, ಅಭಿನಯದಿಂದ ಜನರ ಮನಸ್ಸನ್ನು ತಲುಪಿ, ಭಾವನೆಗಳನ್ನು ಕೆರಳಿಸಿ, ಸಮಾಜಕ್ಕೆ ಸ್ಪೂರ್ತಿ ತುಂಬಿರುತ್ತಾರೆ. ಪ್ರತಿಭಾವಂತ ಕಲಾವಿದನ ನಿಧನ ಕಲೆ ಮತ್ತು ಸಾಂಸ್ಕೃತಿಕ ರಂಗದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸುತ್ತದೆ ಎಂದರು.

ಎಂ.ಎಸ್‌ ಉಮೇಶ್‌ ಅವರು ಬಾಲ್ಯದಿಂದಲೇ ಅಭಿನಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಹಿರಣ್ಣಯ್ಯರ ನಾಟಕ ಕಂಪನಿಯಲ್ಲಿ ಬಾಲನಟನಾಗಿ ನಂತರ ಗುಬ್ಬಿ ವೀರಣ್ಣರ ಕಂಪನಿಯಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿದರು. 1960ರಲ್ಲಿ ʻಮಕ್ಕಳ ರಾಜ್ಯʼ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದರು ಎಂದರು.

ಜಾನಪದ ಕಲಾವಿದ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿ ಶ್ಯಾಕಲದೇವನಪುರ ಗ್ರಾಮದ ರಾಮಚಂದ್ರಯ್ಯ ಹಲವಾರು ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಹಿರಿಯ ಕಲಾವಿದರಿಗೆ ಸರ್ಕಾರದಿಂದ ಮಾಸಾಶನ ದೊರೆಯುವಂತೆ ಮಾಡಿದರು. ದೊಡ್ಡಬಳ್ಳಾಪುರಕ್ಕೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾವಿದರನ್ನು ಕರೆಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸ್ಥಳೀಯ ಕಲಾವಿದರನ್ನು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ‌ಭಾಗವಹಿಸುವಂತೆ ಮಾಡಿದ್ದರು ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರ ಸಂಜೀವ್ ನಾಯಕ್, ಗುರುರಾಜಪ್ಪ, ಕನ್ನಡ ಪಕ್ಷದ‌‌ ಜಿಲ್ಲಾಧ್ಯಕ್ಷ ಮುನಿಪಾಪಣ್ಣ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು  ಕಾರ್ಯದರ್ಶಿ ಡಿ.ಪಿ.ಆಂಜನೇಯ,   ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ನಾಗರತ್ನಮ್ಮ, ಕೋದಂಡರಾಮ್, ಜಿ.ವಿ‌.ಗಣೇಶ್,   ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೈಹಿಕ ಶ್ರೀನಿವಾಸ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಇಸ್ತೂರು ರಂಗಸ್ವಾಮಯ್ಯ, ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

48 minutes ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

3 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

13 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

17 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

19 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

19 hours ago