ಹಿಂದಿನ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ, ಎಸ್.ಪಿ/ಟಿ.ಎಸ್.ಪಿ ಅನುದಾನ ಹೆಚ್ಚಾಗಿರಲಿಲ್ಲ- ಸಿಎಂ‌ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿರೂ.ಗಳು ವೆಚ್ಚವಾಗಿದೆ. 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ. ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024-25ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ನಮ್ಮ ಪ್ರಣಾಳಿಕೆಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು.

ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿ.ಟಿ. ಸಿ.ಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್.ಸಿ.ಎಸ್.ಟಿ ಜನಾಂಗದವರಿಗೆ ಗುತ್ತಿಗೆಯಲ್ಲಿ 1 ಕೋಟಿ ವರೆಗೆ ಮೀಸಲಾತಿ ನೀಡಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಲು ಈ ಕ್ರಮಗಳನ್ನು ಕೈಗೊಂಡಿದೆ. 7% ಪರಿಶಿಷ್ಟ ವರ್ಗದವರಿದ್ದಾರೆ, 17.15% ಪರಿಶಿಷ್ಟ ಜಾತಿಯವರಿದ್ದಾರೆ. 21.1 % ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸದಲ್ಲಿ ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ, ಎಸ್ ಪಿ / ಟಿಎಸ್ ಪಿ ಅನುದಾನ ಹೆಚ್ಚಾಗಿರಲಿಲ್ಲ. ಇದನ್ನು ಗುರುತಿಸಬೇಕು. ನಮ್ಮ ಸರ್ಕಾರ ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ ಎಂದು ಹೇಳಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್,  ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *