ಕರ್ನಾಟಕದಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿರೂ.ಗಳು ವೆಚ್ಚವಾಗಿದೆ. 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ. ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024-25ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ನಮ್ಮ ಪ್ರಣಾಳಿಕೆಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು.
ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿ.ಟಿ. ಸಿ.ಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್.ಸಿ.ಎಸ್.ಟಿ ಜನಾಂಗದವರಿಗೆ ಗುತ್ತಿಗೆಯಲ್ಲಿ 1 ಕೋಟಿ ವರೆಗೆ ಮೀಸಲಾತಿ ನೀಡಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಲು ಈ ಕ್ರಮಗಳನ್ನು ಕೈಗೊಂಡಿದೆ. 7% ಪರಿಶಿಷ್ಟ ವರ್ಗದವರಿದ್ದಾರೆ, 17.15% ಪರಿಶಿಷ್ಟ ಜಾತಿಯವರಿದ್ದಾರೆ. 21.1 % ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸದಲ್ಲಿ ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.
ಹಿಂದಿನ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ, ಎಸ್ ಪಿ / ಟಿಎಸ್ ಪಿ ಅನುದಾನ ಹೆಚ್ಚಾಗಿರಲಿಲ್ಲ. ಇದನ್ನು ಗುರುತಿಸಬೇಕು. ನಮ್ಮ ಸರ್ಕಾರ ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ ಎಂದು ಹೇಳಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…